Wednesday, November 20, 2024
ಸುದ್ದಿ

ಏ.20ರಿಂದ ಕರ್ನಾಟಕದಲ್ಲಿ ಲಾಕ್‌ಡೌನ್ ಸಡಿಲಿಕೆ: ಬಿಎಸ್‌ವೈ ಹೇಳಿದ್ದೇನು?-ಕಹಳೆ ನ್ಯೂಸ್

ಬೆಂಗಳೂರು, ಏಪ್ರಿಲ್ 18: ಕರ್ನಾಟಕದಲ್ಲಿ ಏಪ್ರಿಲ್ 20ರಿಂದ ಕೊರೊನಾ ಲಾಕ್‌ಡೌನ್ ನಿಯಮ ಸಡಿಲಗೊಳಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಕೊವಿಡ್ 19 ನಿರ್ವಹಣೆ ಕುರಿತಂತೆ ಇಂದು ಹಿರಿಯ ಸಚಿವರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು. ಲಾಕ್ ಡೌನ್ ಉಲ್ಲಂಘನೆಯ ದೂರುಗಳು ಹೆಚ್ಚುತ್ತಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು. ಏಪ್ರಿಲ್ 20ರ ನಂತರ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊವಿಡ್ ಪ್ರಕರಣಗಳು ಪತ್ತೆಯಾದ ಪ್ರದೇಶವನ್ನು ಕಂಟೇನ್ ಮೆಂಟ್ ಝೋನ್ ಗುರುತಿಸುವುದು ಹಾಗೂ ಇತರ ಪ್ರದೇಶಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಂಟೇನ್ಮೆಂಟ್ ಝೋನ್ ನಲ್ಲಿ ಇನ್ಸಿಡೆಂಟ್ ಕಮಾಂಡರ್ ನೇಮಕ ಮಾಡಿ ಅವರಿಗೆ ಮ್ಯಾಜಿಸ್ಟೀರಿಯಲ್ ಅಧಿಕಾರ ನೀಡಲಾಗುವುದು. ಜೊತೆಗೆ ಪೊಲೀಸ್, ಆರೋಗ್ಯ ಇಲಾಖೆ ಸಿಬ್ಬಂದಿಯ ತಂಡ ರಚಿಸಲಾಗುವುದು. ಅವರು ಕಂಟೇನ್ಮೆಂಟ್ ಝೋನ್ ಗಳ ಮೇಲ್ಚಿಚಾರಣೆ ವಹಿಸುವುದು.

ಈ ಪ್ರದೇಶದಲ್ಲಿ ಲಾಕ್ ಡೌನ್ ಅನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾರೂ ಮನೆಯಿಂದ ಹೊರ ಬರುವಂತಿಲ್ಲ. ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೇ ತಲುಪಿಸಲಾಗುವುದು. ಬಫರ್ ಝೋನ್ ನಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆಗಳು ಪ್ರಾರಂಭಿಸಲು ಅನುಮತಿ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನಾ ವಲಯದ ಕೈಗಾರಿಕೆಗಳು, ಹಾಗೂ ನಗರ ಪ್ರದೇಶದಲ್ಲಿ ಎಸ್‌ಇ ಝಡ್ ಗಳು, ಕೈಗಾರಿಕಾ ವಸಾಹತುಗಳು, ಕೈಗಾರಿಕಾ ಟೌನ್ ಷಿಪ್ ಗಳಲ್ಲಿ ಕೈಗಾರಿಕೆಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗುವುದು.

ಅಂತರ ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ. ಬೆಂಗಳೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಕೈಗಾರಿಕೆಗಳ ಉದ್ಯೋಗಿಗಳ ಓಡಾಟದ ದೃಷ್ಟಿಯಿಂದ ಒಂದು ಜಿಲ್ಲೆಯಾಗಿ ಪರಿಗಣಿಸಲಾಗುವುದು. ಹಿರಿಯ ನಾಗರಿಕರು ಮನೆಯಿಂದ ಹೊರಬರಬಾರದು. ಮಾಸ್ಕ್ ಧರಿಸುವುದು ಕಡ್ಡಾಯ.

ಎಲ್ಲ ಕಡೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಉಗುಳುವುದನ್ನು ನಿಷೇಧಿಸಲಾಗಿದೆ. ಮೇ 03ರ ವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಮುಂದುವರೆಸಲಾಗುವುದು ಎಂದು ಮಾಹಿತಿ ನೀಡಿದರು.

ಕಟ್ಟಡ ಕಾರ್ಮಿಕರನ್ನು ಕಟ್ಟಡ ನಿರ್ಮಾಣ ಮಾಡುವ ಬಳಿಯೇ ಇರಿಸಿಕೊಳ್ಳುವುದು ,ಆ ಕಾರ್ಮಿಕರಿಗೆ ಊಟ , ತಿಂಡಿ ವ್ಯವಸ್ಥೆ ಅಲ್ಲೇ ಮಾಡಬೇಕು ಎಂದರು.

262 ಪ್ರಕರಣಗಳು ಆಕ್ಟಿವ್
ಕರ್ನಾಟಕದಲ್ಲಿ 262 ಪ್ರಕರಣಗಳು ಆಕ್ಟಿವ್

ಕರ್ನಾಟಕದಲ್ಲಿ 371 ಪ್ರಕರಣಗಳ ಪೈಕಿ 262 ಪ್ರಕರಣಗಳು ಮಾತ್ರ ಆಕ್ಟಿವ್ ಆಗಿವೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವುದು ಸಮಾಧಾನಕರ ಸಂಗತಿಯಾಗಿದೆ. ಲಾಕ್‌ಡೌನ್ ಉಲ್ಲಂಘನೆ ಕಂಟೇನ್ಮೆಂಟ್ ಝೋನ್‌ಗಳೆಂದು ಕರೆಯಲಾಗಿದೆ.ಯಾರು ಮನೆಯಿಂದ ಹೊರಗೆ ಬರುವಂತಿಲ್ಲ ಕಂಟೈನ್ ಮೆಂಟ್ ಜೋನ್ ನಲ್ಲಿ ದ್ವಿಚಕ್ರ ವಾಹನ ಓಡಾಡುವಂತಿಲ್ಲ ,ಮೇ3 ರ ವರೆಗೂ ಕೋವಿಡ್ ಪಾಸ್ ಇರುತ್ತದೆ ಎಂದು ತಿಳಿಸಿದ್ದಾರೆ.

ಶೇ.33ರಷ್ಟು ಸಿಬ್ಬಂದಿಗೆ ಮಾತ್ರ ಹಾಜರಾಗಬಹುದು
ಐಟಿ, ಬಿಟಿ ವಲಯಗಳಲ್ಲಿ ಶೇ.33ರಷ್ಟು ಸಿಬ್ಬಂದಿ ಹಾಜರಾಗಲು ಅನುಮತಿ

ಐಟಿ ಬಿಟಿಗಳಲ್ಲಿ ಶೇ‌33ರಷ್ಡು ಸಿಬ್ಬಂದಿ ಹಾಜರಾಗಲು ಅನುಮತಿಅಂತರ್‌ಜಿಲ್ಲೆ ಪ್ರವೇಶಕ್ಕೆ ಅನುಮತಿ ಇಲ್ಲಬೆಂಗಳೂರು ರಾಮನಗರ ಸಂಚಾರಕ್ಕೆ ಅಡ್ಡಿಯಿಲ್ಲಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಡ್ಡಾಯಯಾವುದೇ ಕಾರಣಕ್ಕೆ ಹೊಸ ಪಾಸ್ ನೀಡಲ್ಲ.

ದ್ವಿಚಕ್ರ ವಾಹನ ಸವಾರರು ಓಡಾಡಬಹುದು

ಏಪ್ರಿಲ್ 20ರಿಂದ ದ್ವಿಚಕ್ರ ವಾಹನ ಸವಾರರು ಓಡಾಡಬಹುದು

ಏಪ್ರಿಲ್ 20ನೇ ತಾರೀಖಿನ ನಂತರ ದ್ವಿಚಕ್ರ ವಾಹನ ಓಡಾಡುವುದಕ್ಕೆ ಅವಕಾಶ ಬೆಂಗಳೂರಿನಲ್ಲಿ ಮಾತ್ರ ದ್ವಿಚಕ್ರ ವಾಹನ ಓಡಾಡಬಹುದು ಬೆಂಗಳೂರು ಬಿಟ್ಟು ಹೊರಗಡೆ ದ್ವಿಚಕ್ರ ವಾಹನ ಸವಾರರು ಹೊಗುವಂತಿಲ್ಲ.

ಎಚ್‌ಡಿಕೆ ಲಾಕ್‌ಡೌನ್ ಉಲ್ಲಂಘನೆ ಮಾಡಿಲ್ಲ
ಕಮಾರಸ್ವಾಮಿ ಪುತ್ರನ ಮದುವೆಯಲ್ಲಿ ಲಾಕ್‌ಡೌನ್ ಉಲ್ಲಂಘನೆಯಾಗಿಲ್ಲ

ಕುಮಾರಸ್ವಾಮಿ ಪುತ್ರನ ವಿವಾಹ ವಿಚಾರ ಕುರಿತು ಮಾತಣಾಡಿ, ಅವರದ್ದು ಕುಟುಂಬ ಅತ್ಯಂತ ದೊಡ್ಡ ಕುಟುಂಬ, ಸರ್ಕಾರದಿಂದ ಅನುಮತಿ‌ಪಡೆದು ಮದುವೆ ಮಾಡಿದ್ದಾರೆ, ಅನುಮತಿಯಂತೆ ಅತ್ಯಂತ ಕಡಿಮೆ ಜನರು ಭಾಗವಹಿಸಿದ್ದರು. ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ, ಲಾಕ್‌ಡೌನ್ ಪಾಲಿಸಿದ್ದಕ್ಕೆ ಕುಮಾರಸ್ವಾಮಿಗೆ ಅಭಿನಂದನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.