Recent Posts

Tuesday, November 26, 2024
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಮೊದಲ ಬಲಿ ; ಉಸಿರಾಟದ ತೊಂದರೆಯಿಂದ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಬಂಟ್ವಾಳ ಮೂಲದ 45 ವರ್ಷದ ಮಹಿಳೆಗೆ ಕೊರೊನ ಸೋಂಕು ದೃಢ…! – ಕಹಳೆ ನ್ಯೂಸ್

ಮಂಗಳೂರು: ಉಸಿರಾಟದ ತೊಂದರೆಯಿಂದ ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಇಂದು (ಎಪ್ರಿಲ್ 19) ಮೃತಪಟ್ಟಿರುವ ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ 45 ವರ್ಷ ವಯಸ್ಸಿನ ಮಹಿಳೆ ಉಸಿರಾಟದ ತೊಂದರೆಯಿಂದಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಉಸಿರಾಟದ ತೊಂದರೆ ಹಿನ್ನಲೆ ಅವರನ್ನು ನಿನ್ನೆ ವೆನ್ಲಾಕ್ ನಲ್ಲಿರುವ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಶಂಕಿತ ಕೊರೊನಾ ರೋಗದ ಲಕ್ಷಣಗಳ ಹಿನ್ನೆಲೆ ನಿನ್ನೆಯೇ ಮಹಿಳೆಯ ಗಂಟಲು ದ್ರವವನ್ನು ಕೋವಿಡ್ 19 ಪರೀಕ್ಷೆಗೆ ಕಳುಹಿಸಲಾಗಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಇಂದು ಬೆಳಿಗ್ಗೆ ಉಸಿರಾಟದ ತೊಂದರೆ ವಿಷಮ ಸ್ಥಿತಿಗೆ ತಲುಪಿದ ಹಿನ್ನಲೆ ಮಹಿಳೆ ಸಾವನಪ್ಪಿದ್ದಾರೆ.

ಕೊವಿಡ್ 19 ಪರೀಕ್ಷೆಯ ವರದಿ ಇದೀಗ ಬಂದಿದ್ದು, ಜಿಲ್ಲೆಯ ಜನರನ್ನು ಬೆಚ್ಚಿಬೀಳಿಸಿದೆ‌. ಮಹಿಳೆ ಕೊರೊನಾ ಸೋಂಕಿನಿಂದ ಮೃತಪಟ್ಟಿರುವುದು ಖಚಿತವಾಗಿದೆ.

ಕೊರೊನ ಪರೀಕ್ಷೆಯಲ್ಲಿ ಮಹಿಳೆಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.