Friday, January 24, 2025
ರಾಜಕೀಯಸುದ್ದಿ

Breaking News : ಪಾದರಾಯನಪುರ ಗಲಾಟೆ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್.ವೈ ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಪಾದರಾಯನಪುರದಲ್ಲಿ ಕಳೆದ ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ.

ಘಟನಾ ಹಿನ್ನೆಲೆಯಲ್ಲಿ ಕಳೆದ ತಡರಾತ್ರಿಯವರೆಗೆ ತಮ್ಮ ನಿವಾಸದಲ್ಲಿ ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಆಯುಕ್ತರಿಂದ ಮಾಹಿತಿ ಸಂಗ್ರಹಿಸಿದರು. ಘಟನೆಗೆ ಪ್ರಚೋದನೆ ಇತ್ತಾ, ಘಟನೆಯ ಹಿಂದೆ ಯಾರದ್ದಾದರೂ ಕೈವಾಡವಿದೆಯಾ, ಘಟನೆ ಪೂರ್ವನಿಯೋಜಿತವಾ ಎಂಬೆಲ್ಲದರ ಬಗ್ಗೆ ಸಿಎಂ ಹಿರಿಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಇದರೊಂದಿಗೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಠಿಣ ಸೂಚನೆ ನೀಡಿದ್ದಾರೆ. ಇನ್ನು ಇದೇ ವೇಳೆ, ಸಿಎಂ ಆಶಾ ಕಾರ್ಯಕರ್ತೆಯರಿಗೆ ಭದ್ರತೆ ನೀಡಬೇಕು. ಗಲಾಟೆ ನಡೆಯುವ ಸಂಭವವಿರುವ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದ್ದಾರೆ. ಇದರೊಂದಿಗೆ ಘಟನೆ ಕುರಿತಂತೆ ವರದಿ ನೀಡುವಂತೆ ಸಿಎಂ ಗೃಹ ಸಚಿವ ಬೊಮ್ಮಾಯಿ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರು ಸಿಎಂ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ತಡರಾತ್ರಿಯ ಬಳಿಕ ನಡೆದಿರುವ ಬೆಳವಣಿಗೆಗಳ ಕುರಿತಂತೆ ಯಡಿಯೂರಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು