Recent Posts

Sunday, January 19, 2025
ಸುದ್ದಿ

ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿ ತಳ್ಳಿ ಹಾಕಿದ ನ್ಯಾಯಾಲಯ

ಬೆಂಗಳೂರು: ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ.

ಬೆಂಗಳೂರಿನ 63 ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದ್ದು, ಮೊಹಮ್ಮದ್ ನಲಪಾಡ್‌ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಪಿ ಪ್ರಭಾವಿಯಾಗಿರುವುದರಿಂದ ಜಾಮೀನು ಬೇಡ. ಆರೋಪಿಗಳು ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದರು. ಹೀಗಾಗಿ ನ್ಯಾಯಾಲಯ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ತಳ್ಳಿ ಹಾಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೊಹಮ್ಮದ್ ನಲಪಾಡ್‌ ಬೆಂಗಳೂರಿನ ಯು.ಬಿ.ಸಿಟಿಯಲ್ಲಿನ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಿಂದಾಗಿ ಮೊಹಮ್ಮದ್ ನಲಪಾಡ್‌ ಬಂಧಿತನಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾನೆ. ಮೊಹಮ್ಮದ್ ನಲಪಾಡ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.