Thursday, January 23, 2025
ಸುದ್ದಿ

ರಾಮನಗರ ಜೈಲಿನಲ್ಲಿರುವ ಪಾದರಾಯನಪುರದ ಪುಂಡರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ರಾಮನಗರ, ಎ.24  : ಬೆಂಗಳೂರಿನ ಪಾದರಾಯನಪುರದಲ್ಲಿ ಗಲಭೆ ಮಾಡಿದ ಆರೋಪದ ಮೇಲೆ ಬಂಧನ ಮಾಡಲಾದವರನ್ನು ಮಂಗಳವಾರ ರಾಮನಗರ ಜೈಲಿನಲ್ಲಿ ಇರಿಸಲಾಗಿದ್ದು ಇದೀಗ ಅವರಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳವಾರ ರಾಮನಗರ ಜೈಲಿನಲ್ಲಿದ್ದ 177 ಕೈದಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಲಾಗಿದ್ದು ಬಳಿಕ ರಾಮನಗರ ಜೈಲನ್ನು ಸ್ವಚ್ಛಗೊಳಿಸಿ ಅಲ್ಲಿ ಪಾದರಾಯನಪುರ ಪ್ರಕರಣದ 49 ಆರೋಪಿಗಳನ್ನು ಇರಿಸಲಾಗಿತ್ತು. ಈ ಸಂದರ್ಭದಲ್ಲಿ ಅವರ ಆರೋಗ್ಯ ತಪಾಸಣೆ ನಡೆಸಿ ಗಂಟಲ ದ್ರವ ಹಾಗೂ ರಕ್ತದ ಮಾದರಿಯನ್ನು ಪಡೆದು ಪರೀಕ್ಷೆಗೆ ಕಳುಹಿಸಲಾಗಿದ್ದು ಇಬ್ಬರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಾದರಾಯನಪುರ ಆರೋಪಿಗಳಿಗೆ ಸೋಂಕು ಇದೆ ಎಂದು ದೃಢಪಟ್ಟ ಕೂಡಲೇ ಬೆಂಗಳೂರಿನ ಆಸ್ಪತ್ರೆಯೊಂದಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಆರೋಪಿಗಳು ಪಾದರಾಯನಪುರದಲ್ಲಿ ಕೊರೊನಾ ಶಂಕಿತರನ್ನು ಕ್ವಾರಂಟೈನ್‌ ಇರಿಸಲೆಂದು ಹೋದ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 121 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದ್ದು ಅವರೆಲ್ಲರನ್ನೂ ಹಂತಹಂತವಾಗಿ ರಾಮನಗರ ಜೈಲಿಗೆ ಸ್ಥಳಾಂತರ ಮಾಡಲಾಗುತ್ತಿತ್ತು.

ಇನ್ನು ಈ ಜೈಲಿನಲ್ಲಿರುವ ಉಳಿದ ಆರೋಪಿಗಳನ್ನೂ ಬೆಂಗಳೂರಿನ ಹಜ್‌ ಭವನಕ್ಕೆ ಸ್ಥಳಾಂತರ ಮಾಡುವುದರ ಕುರಿತಾಗಿ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ. ಜೈಲು ಇಕ್ಕಟ್ಟಾಗಿದ್ದು ಒಂದೇ ಕೊಠಡಿಯಲ್ಲಿ ಇಪ್ಪತ್ತಕ್ಕೂ ಅಧಿಕ ಮಂದಿಯನ್ನು ಇರಿಸಲಾಗಿತ್ತು. ಇವರೊಂದಿಗೆ ಜೈಲಿನ ಸಿಬ್ಬಂದಿ ಹಾಗೂ ಸ್ಥಳಾಂತರ ಕಾರ್ಯಕ್ಕೆ ನಿಯೋಜಿತರಾಗಿದ್ದ ಪೊಲೀಸರನ್ನೂ ಕ್ವಾರಂಟೈನ್‌ಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಮಂಗಳವಾರ ಈ ಆರೋಪಿಗಳನ್ನು ರಾಮನಗರ ಜೈಲಿನಲ್ಲಿ ಇರಿಸುವಾಗ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ನಗರದ ಒಳಗೆ ಈ ರಾಮನಗರ ಕಾರಾಗೃಹವು ಇದ್ದು ಜಿಲ್ಲಾಧಿಕಾರಿಗಳ ಕಚೇರಿಗೆ ಹತ್ತಿರವಾಗಿದೆ. ಅಷ್ಟು ಮಾತ್ರವಲ್ಲದೇ ಈವರೆಗೆ ಒಂದೂ ಕೊರೊನಾ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ. ಹೀಗಿರುವಾಗ ಇಲ್ಲಿಗೆ ಪಾದರಾಯಣಪುರ ಆರೋಪಿಗಳನ್ನು ಕರೆತರಬಾರದು ಎಂದು ಒತ್ತಾಯಿಸಿದ್ದರು.

ನಗರದ ಒಳಗೆ ಈ ರಾಮನಗರ ಕಾರಾಗೃಹವು ಇದ್ದು ಜಿಲ್ಲಾಧಿಕಾರಿಗಳ ಕಚೇರಿಗೆ ಹತ್ತಿರವಾಗಿದೆ. ಅಷ್ಟು ಮಾತ್ರವಲ್ಲದೇ ಈವರೆಗೆ ಒಂದೂ ಕೊರೊನಾ ಪ್ರಕರಣಗಳು ಇಲ್ಲಿ ಪತ್ತೆಯಾಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.