ಬೆಂಗಳೂರು: ತ್ರಿಪುರ ರಾಜ್ಯದಲ್ಲಿ ಕಳೆದ 25 ವರ್ಷಗಳಿಂದ ಆಳ್ವಿಕೆ ನಡೆಸುತ್ತಿರುವ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷ ಹಾಗೂ ಭಾರತೀಯ ಜನತಾ ಪಕ್ಷದ ನಡುವ ತೀವ್ರ ಹಣಾಹಣಿ ಏರ್ಪಟ್ಟಿದೆ.
ಬಿಜೆಪಿ 51 ಸ್ಥಾನಗಳಲ್ಲಿ ಹಾಗೂ ಮೈತ್ರಿ ಮಾಡಿಕೊಂಡಿರುವ ಐಪಿಎಫ್ಟಿ 9 ಸ್ಥಾನಗಳಲ್ಲಿ ಸ್ಪರ್ಧೆ ಮಾಡಿದೆ. ಸಿಪಿಎಂ 57 ಸ್ಥಾನಗಳಲ್ಲಿ ಹಾಗೂ ಅದರ ಮೈತ್ರಿ ಪಕ್ಷಗಳಿಗೆ 2 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಕಾಂಗ್ರೆಸ್ ಏಕಾಂಗಿಯಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದೆ.
ಇತ್ತೀಚಿನ ವರದಿಗಳ ಪ್ರಕಾರ ಸಿಪಿಎಂ ಮತ್ತು ಬಿಜೆಪಿ ಸಮಬಲದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು ಇತರರು 1 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಬಿಜೆಪಿ ಮತ್ತು ಸಿಪಿಎಂ ತಲಾ 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.