Thursday, January 23, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ; ಬಂಟ್ವಾಳದಲ್ಲಿ ಮತ್ತೋರ್ವ ಮಹಿಳೆಗೆ ಕೊರೋನಾ ಸೋಂಕು ದೃಢ – ಕಹಳೆ ನ್ಯೂಸ್

* ದ.ಕದಲ್ಲಿ 19ಕ್ಕೆ ಏರಿದ ಕೊರೋನಾ ಪ್ರಕರಣ
* ಖಾಸಗಿ‌ ಆಸ್ಪತ್ರೆಯಲ್ಲಿ ಆಯಾ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಕೊರೋನಾ ಪ್ರಕರಣಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಕಾಣುತ್ತಿಲ್ಲ. ಇಲ್ಲಿನ ಬಂಟ್ವಾಳ ತಾಲೂಕಿನಲ್ಲಿ ಭಾನುವಾರ ಮತ್ತೊಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ 47 ವರ್ಷದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಆಯಾ ಆಗಿ ಕೆಲಸ ಮಾಡಿಕೊಂಡಿದ್ದು, ಆಸ್ಪತ್ರೆಗೆ ಬಂದಿದ್ದ ರೋಗಿಗಳಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಪ್ರಕರಣದ ಮೂಲಕ ಜಿಲ್ಲೆಯಲ್ಲಿ ಒಟ್ಟು 19 ಪ್ರಕರಣಗಳು ಪತ್ತೆಯಾದಂತಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕೊಂದರಲ್ಲಿಯೇ 7 ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ರೋಗಿ ಸಂಖ್ಯೆ 432 ಸಂಪರ್ಕ ದಲ್ಲಿದ 47 ವಯಸ್ಸಿನ ಮಹಿಳೆ ಇವರಿಗೆ ಕೊರೋನಾ ಸೋಂಕು ಇರುವುದು ದೃಡಪಟ್ಟಿರುತದೆ. ಇವರು ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.