Sunday, January 19, 2025
ಸುದ್ದಿ

ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯ ವೈದ್ಯಕೀಯ ವರದಿ ನೆಗೆಟಿವ್..! – ಕಹಳೆ ನ್ಯೂಸ್

ಬೆಳ್ತಂಗಡಿ: ಮಂಗಳೂರು ಫಸ್ಟ್ ನ್ಯೂರೋ ಆಸ್ಪತ್ರೆಯ ಟ್ರಾವೆಲ್ ಲಿಸ್ಟ್‍ನಲ್ಲಿದ್ದು, ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಮಹಿಳೆಯ ಗಂಟಲಿನ ದ್ರವದ ವೈದ್ಯಕೀಯ ವರದಿ ನೆಗೆಟಿವ್ ಆಗಿ ಬಂದಿದೆ.

16 ದಿನಗಳ ಹಿಂದೆ ಹೆರಿಗೆಯಾಗಿದ್ದ ಪಾರೆಂಕಿ ಗ್ರಾಮದ ನಿವಾಸಿ ಮಹಿಳೆ ಬೇರೆ ರೀತಿಯ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಅವರ ಟ್ರಾವೆಲ್ ಹಿಸ್ಟ್ರಿ ಪಡೆದ ಆಸ್ಪತ್ರೆಯ ವೈದ್ಯರು ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಅಲ್ಲಿಂದ ಅವರನ್ನು ತಾಲೂಕು ಆಡಳಿತದ ವತಿಯಿಂದ ವೆನ್‍ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ವೆನ್‍ಲಾಕ್ ಆಸ್ಪತ್ರೆಯಲ್ಲಿ ಅವರ ಗಂಟಲು ದ್ರವದ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ನೆಗೆಟಿವ್ ಆಗಿ ಬಂದಿರುವುದಾಗಿ ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಜಿರೆ ಎಸ್‍ಡಿಎಂ ಆಸ್ಪತ್ರೆಗೆ ಮಹಿಳೆ ಚಿಕಿತ್ಸೆಗಾಗಿ ಬಂದಿರುವುದರಿಂದ ತಾಲೂಕು ಆರೋಗ್ಯಾಧಿಕಾರಿಗಳು ಚಿಕಿತ್ಸೆ ನೀಡಿದ ತಂಡವನ್ನು ಹೋಮ್ ಕ್ವಾರಂಟೈನ್‍ಗೆ ಒಳಪಡಿಸಿದ್ದರೆನ್ನಲಾಗಿದೆ. ಆದರೆ ಇದು ಅಪಪ್ರಚಾರಕ್ಕೆ ಒಳಗಾಗಿ ಸಾಮಾಜಿಕ ಜಾಲತಾಣದಲ್ಲಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿತ್ತು. ಈ ಬಗ್ಗೆ ಸ್ವಷ್ಟನೆ ನೀಡಿದ್ದ ಆಸ್ಪತ್ರೆಯ ಆಡಳಿತಾಧಿಕಾರಿ ಮನ್ಮಥ ಕುಮಾರ್ ಇಂತಹ ಯಾವುದೇ ಘಟನೆಗಳು ನಡೆದಿಲ್ಲ, ಅವರ ರಿಪೋರ್ಟು ಬರುವವರೆಗೆ ಅಗತ್ಯ ಮುಂಜಾಗ್ರತಾ ಕ್ರಮದ ಭಾಗವಾಗಿ ಅವರನ್ನು ಶುಶ್ರೋಷೆಗೊಳಪಡಿಸಿದ ತಂಡವನ್ನು ಹೊರಹೋಗದಂತೆ ಆಸ್ಪತ್ರೆಯ ಆಡಳಿತದ ವತಿಯಿಂದ ಸ್ವಯಂ ಆಗಿ ನಾವೇ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು