Wednesday, January 22, 2025
ಸುದ್ದಿ

Breaking News : ಕೊರೊನಾ ಸೋಂಕಿತ ಬಂಟ್ವಾಳದ ಮಹಿಳೆಯ ಸ್ಥಿತಿ ಗಂಭೀರ ; ವೆಂಟಿಲೇಟರ್ ಅಳವಡಿಕೆ – ಕಹಳೆ ನ್ಯೂಸ್

ಮಂಗಳೂರು, ಏ 29 : ಬಂಟ್ವಾಳದ ಕಸಬ ನಿವಾಸಿ ಕೊರೊನಾ ಸೋಂಕಿತ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಮಹಿಳೆಗೆ ಐಸಿಯುನಲ್ಲಿ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಬಗ್ಗೆ ವೆನ್ಲಾಕ್ ಅಧಿಕ್ಷಕರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಬಂಟ್ವಾಳ ಕಸಬ ನಿವಾಸಿಗಳು ಒಂದೇ ಮನೆಯ ಇಬ್ಬರು ಮಹಿಳೆಯರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅವರ ನೆರೆ ಮನೆಯ ಇಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ವೆನ್ಲಾಕ್ ಅಧೀಕ್ಷಕರು ತಿಳಿಸಿದ್ದು, ವೆಂಟಿವೇಟರ್ ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಕೆಲವು ದಿನಗಳಿಂದ ಈ ಮಹಿಳೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ಮೂರು ದಿನಗಳಿಂದ ಮಹಿಳೆಯ ಆರೋಗ್ಯ ಸ್ಥಿತಿ ಸಹಜವಾಗಿತ್ತು. ಆದರೆ, ಇದೀಘ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ.