Recent Posts

Monday, January 20, 2025
ಸುದ್ದಿ

ಸೋಮವಾರದಿಂದ 12 ಜಿಲ್ಲೆಯೊಳಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕರಿಗೆ ತಮ್ಮ ಊರುಗಳಿಗೆ ಹೋಗಲು ರಾಜ್ಯ ಸರ್ಕಾರ ಶನಿವಾರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಬೆನ್ನಲ್ಲೇ ಹಸಿರು ವಲಯದಲ್ಲಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದೆ.

ಉಡುಪಿಯನ್ನು ಹೊರತುಪಡಿಸಿ ರಾಜ್ಯದ 12 ಹಸಿರು ವಲಯ ಜಿಲ್ಲೆಗಳಲ್ಲಿ ಸೋಮವಾರದಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಆದರೆ ಜಿಲ್ಲೆಯ ಒಳಗೆ ಮಾತ್ರ ಬಸ್‍ಗಳು ಸಂಚರಿಸಲಿವೆ. ಅಂತರ್ ಜಿಲ್ಲೆಯ ಬಸ್ ಸಂಚಾರ ಇರುವುದಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಹಾವೇರಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಪ್ಪಳ, ಚಿತ್ರದುರ್ಗ, ಚಾಮರಾಜನಗರ, ಕೋಲಾರ, ರಾಮನಗರ, ಹಾವೇರಿ, ಹಾಸನ, ದಾವಣಗೆರೆ ಜಿಲ್ಲೆಗಳಲ್ಲಿ ಮಾತ್ರ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ನಾಳೆಯಿಂದ ಆರಂಭವಾಗಲಿದೆ. ಆದರೆ ಖಾಸಗಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಯಾವುದೇ ಅನುಮತಿ ನೀಡಿಲ್ಲ.

ಬಸ್‍ಗಳಲ್ಲಿ ಪ್ರಯಾಣಿಸುವಾಗ ಮಾಸ್ಕ್ ಧರಿಸಲೇ ಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಪ್ರಯಾಣಿಕರಿಗೆ ಥರ್ಮಲ್ ಪರೀಕ್ಷೆ ಕಡ್ಡಾಯವಾಗಬೇಕು. ಒಂದು ಬಸ್‍ನಲ್ಲಿ ಸೀಟ್ ಸಂಖ್ಯೆ ಅರ್ಧದಷ್ಟು ಮಾತ್ರ ಜನರು ಪ್ರಯಾಣಿಸಬೇಕು.

ಚಿಕ್ಕಮಗಳೂರಿನ ಜಿಲ್ಲೆಯೊಳಗೆ ನಾಳೆಯಿಂದ ಶೇಕಡ 25ರಷ್ಟು ಬಸ್ ಓಡಾಡಲು ಅನುಮತಿ ನೀಡಲಾಗಿದೆ. ಒಂದು ಬಸ್‍ನಲ್ಲಿ 27 ಜನ ಮಾತ್ರ ಸಂಚಾರ ಮಾಡಬೇಕು. ಅರ್ಧಗಂಟೆ ಮುಂಚೆ ಬಸ್ ನಿಲ್ದಾಣಕ್ಕೆ ಬರಬೇಕು. ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು. ಸ್ಯಾನಿಟೈಸರ್ ನಿಂದ ಕೈ ತೊಳೆದು ಬಸ್ ಹತ್ತಬೇಕು. ಬಸ್‍ನಲ್ಲಿ ಏನನ್ನೂ ತಿನ್ನುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.