Saturday, January 25, 2025
ರಾಜಕೀಯಸುದ್ದಿ

ಕನ್ನಡಿಗರ ನೆರವಿಗೆ ನಿಂತ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ; ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ರಾಜ್ಯಕ್ಕೆ ಮರಳಲು ವಿಶೇಷ ವಿಮಾನ, ರೈಲು ವ್ಯವಸ್ಥೆ – ಕಹಳೆ ನ್ಯೂಸ್

ನವದೆಹಲಿ: ಕೊರೊನಾ ಲಾಕ್‍ಡೌನ್‍ನಿಂದಾಗಿ ಉತ್ತರ ಭಾರತದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ದೆಹಲಿಯಿಂದ ಕರ್ನಾಟಕಕ್ಕೆ ಇನ್ನೆರಡು ದಿನಗಳಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಉತ್ತರ ಭಾರತದಲ್ಲಿ ಸಿಲುಕಿರುವ ಕನ್ನಡಿಗರು ರಾಜ್ಯಕ್ಕೆ ಮರಳುವುದಕ್ಕಾಗಿ ವಿಶೇಷ ರೈಲೊಂದನ್ನು ಓಡಿಸಲು ರೈಲ್ವೆ ಇಲಾಖೆಯು ಒಪ್ಪಿಗೆ ನೀಡಿದೆ. ಈ ಸಂಬಂಧ ರೈಲ್ವೆ ಸಚಿವ ಪಿಯುಶ್ ಗೋಯಲ್ ಜೊತೆಗೆ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಒಂದೆರಡು ದಿನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ರೈಲು ಸಂಚರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿಯ ಹೊರತಾಗಿ ಹರ್ಯಾಣ, ಪಂಜಾಬ್ ಮತ್ತಿತರ ಸಮೀಪದ ಸ್ಥಳಗಳಿಂದಲೂ ಜನರು ರಾಜ್ಯಕ್ಕೆ ವಾಪಸ್ ಆಗಬಹುದಾಗಿದೆ. ಈ ನಿಟ್ಟಿನಲ್ಲಿ ದೆಹಲಿಯ ಸುತ್ತ ಬೇರೆ ನೇರ ಪ್ರದೇಶಗಳಲ್ಲಿರುವ ಕನ್ನಡಿಗರನ್ನು ಕೂಡಲೇ ದೆಹಲಿಗೆ ಕರೆಸಿಕೊಂಡು ಅವರನ್ನೂ ಇದೇ ರೈಲಿನಲ್ಲಿ ಕರ್ನಾಟಕಕ್ಕೆ ಕಳುಹಿಸಿಕೊಡಲು ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿ ಮತ್ತಿತರ ಸ್ಥಳಗಳಿಂದ ತಮ್ಮ ಸ್ವಂತ ವಾಹನದಲ್ಲಿ ಕರ್ನಾಟಕಕ್ಕೆ ಮರಳಲು ಇಚ್ಛಿಸಿದ ಅನೇಕ ದೆಹಲಿ ಕನ್ನಡಿಗರು ಹಾಗೂ ಯಾತ್ರಾರ್ಥಿಗಳಿಗೂ ಅಗತ್ಯ ಪರವಾನಿಗೆ ನೀಡಲಾಗುತ್ತಿದೆ.

ದುಬೈನಿಂದ 2 ವಿಶೇಷ ವಿಮಾನ:
ಅರಬ್ ದೇಶಗಳಲ್ಲಿರುವ ಕನ್ನಡಿಗರು ಸ್ವದೇಶಕ್ಕೆ ಮರಳಲು ಎರಡು ವಿಶೇಷ ವಿಮಾನಗಳ ವ್ಯವಸ್ಥೆ ಮಾಡಲಾಗಿದ್ದು, ಮೇ 12ರಂದು ಯುಎಇನಿಂದ ಮಂಗಳೂರಿಗೆ ವಿಮಾನ ಸಂಚರಿಸುವುದನ್ನು ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇನ್ನೊಂದು ವಿಮಾನ ಬೆಂಗಳೂರಿಗೆ ಬರಲಿದ್ದು, ಅದರ ವೇಳಾಪಟ್ಟಿ ಪ್ರಕಟವಾಗಬೇಕಿದೆ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.