ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ; ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ – ಕಹಳೆ ನ್ಯೂಸ್
ಮಂಗಳೂರು, ಮೇ 11 : ದುಬೈಯಲ್ಲಿ ಭಾರತೀಯರನ್ನು ಕರೆದುಕೊಂಡು ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ.
ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಆಸ್ಪತ್ರೆಗೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್ ಕೇಂದ್ರಗಳಿಗೆ ಜಿಲ್ಲಾಡಳಿತವೇ ವಾಹನದ ಮೂಲಕ ಕರೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ.
ಈ ಹಿನ್ನಲೆ ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರು ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಬರಲು ಅವಕಾಶ ಇಲ್ಲ. ಅಲ್ಲದೇ, ಸಾರ್ವಜನಿಕರಿಗೂ ಕ್ವಾರಂಟೈನ್ ಕೇಂದ್ರಗಳಿಗೆ ಪ್ರವೇಶವಿಲ್ಲ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದೆ.