Friday, January 24, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದುಬಾರಿ ವಿದ್ಯುತ್ ಬಿಲ್ ನಿಂದ ಕಂಗೆಟ್ಟ ಗ್ರಾಹಕ ; ಜೂನ್ ತಿಂಗಳವರೆಗೆ ಬಿಲ್ ವಸೂಲಿ ಇಲ್ಲ, ಮೆಸ್ಕಾಂ ಆಡಳಿತ ನಿರ್ದೇಶಕಿ ಸ್ನೇಹಲ್ ಸ್ಪಷ್ಟನೆ – ಕಹಳೆ ನ್ಯೂಸ್

ಮಂಗಳೂರು, ಮೇ 12 : ವಿದ್ಯುತ್ ಬಿಲ್ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಕ್ಕೆ ಸಂಬಂಧಿಸಿದಂತೆ ಮೆಸ್ಕಾಂ ಆಡಳಿತ ನಿರ್ದೇಶಕಿ ಸ್ನೇಹಲ್ ಸ್ಪಷ್ಟನೆ ನೀಡಿದ್ದಾರೆ. ಜೂನ್ ಅಂತ್ಯದ ತನಕ ವಿದ್ಯುತ್ ಬಿಲ್ ಪಾವತಿಸದಿದ್ದಲ್ಲಿ ಯಾವುದೇ ದಂಡವನ್ನು ವಿಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಲ್ ಪಾವತಿ ವಿಚಾರದಲ್ಲಿ ಗೊಂದಲ ಉಂಟಾಗಿದೆ. ಗ್ರಾಹಕರಿಗೆ ಅನಗತ್ಯ ತೊಂದರೆ ನೀಡಬಾರದು. ಸರಕಾರದ ಆದೇಶದಂತೆ ಜೂನ್ ಅಂತ್ಯದ ತನಕ ವಿನಾಯಿತಿ ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜೂನ್ ಅಂತ್ಯದ ತನಕ ಅವಕಾಶ ನೀಡಲಾಗಿದೆ. ಅಲ್ಲಿಯ ತನಕ ಬಿಲ್ ಪಾವತಿಸದವರಿಂದ ಹೆಚ್ಚುವರಿಯಾಗಿ ಯಾವುದೇ ಹಣ ವಸೂಲಿ ಮಾಡುವುದಿಲ್ಲ. ಹಾಗೂ ಯಾವುದೇ ದಂಡವನ್ನು ಕೂಡ ವಿಧಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.