ಫಸ್ಟ್ ನ್ಯೂರೋದಲ್ಲಿದ್ದವರಿಗೆ ಇನ್ನು ಹೋಂ ಕ್ವಾರಂಟೈನ್ ; ಆಸ್ಪತ್ರೆಯಲ್ಲಿ ಕ್ವಾರಂಟೈನ್ ಅವಧಿ ಮುಕ್ತಾಯ..! – ಕಹಳೆ ನ್ಯೂಸ್
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೋನಾ ಹಾಟ್ಸ್ಪಾಟ್ ಆಗಿ ಗುರುತಿಸಿಕೊಂಡ ಪಡೀಲ್ನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿದ್ದವರು 22 ದಿನಗಳನ್ನು ಪೂರೈಸಿರುವುದರಿಂದ ಇನ್ನು ಮುಂದೆ ಅವರು ಹೋಂ ಕ್ವಾರಂಟೈನ್ಗೆ ಒಳ ಪಡಲಿದ್ದಾರೆ.
ಆಸ್ಪತ್ರೆಯ ವೈದ್ಯರು ಹಾಗೂ ಇತರೆ ಸಿಬ್ಬಂದಿಗಳು ಆಸ್ಪತ್ರೆಯಲ್ಲಿ ಕ್ವಾರಂಟೈನ್ ಅವಧಿಯನ್ನು ಮುಗಿಸಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಿ ಕೊಡಲಾಗಿದೆ. 22 ದಿನಗಳನ್ನು ಪೂರೈಸಿದ್ದು, 28 ದಿನಗಳನ್ನು ಪೂರೈಸುವವರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಲಿದ್ದಾರೆ. ಇದುವರೆಗೆ 75ಕ್ಕೂ ಅಧಿಕ ಮಂದಿ ಫಸ್ಟ್ ನ್ಯೂರೋದ ವೈದ್ಯರು ಮತ್ತು ಸಿಬ್ಬಂದಿಗಳು ಆಸ್ಪತ್ರೆಯಲ್ಲಿಯೇ ಕ್ವಾರಂಟೈನ್ನಲ್ಲಿದ್ದರು.