Thursday, January 23, 2025
ಸುದ್ದಿ

ಶನಿವಾರ ಸಂಜೆಯಿಂದ ಸೋಮವಾರ ಬೆಳಗ್ಗಿನ ತನಕ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಪೂರ್ಣ ಲಾಕ್ ಡೌನ್ ; ಯಾವುದಕ್ಕೆಲ್ಲಾ ಅನುಮತಿ ಇದೆ ಗೊತ್ತಾ..? – ಜಿಲ್ಲಾಧಿಕಾರಿ ಸಿಂಧೂ ಬಿ‌ ರೂಪೇಶ್ ಆದೇಶ ಏನು ..? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮೇ 23ರ ಶನಿವಾರ ಸಂಜೆ 7 ಗಂಟೆಯಿಂದ ಮೇ 25ರ ಸೋಮವಾರ ಬೆಳಗ್ಗೆ 7 ಗಂಟೆಯ ತನಕ ಲಾಕ್ ಡೌನ್ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ದಿನಪತ್ರಿಕೆ, ತರಕಾರಿ, ಮೀನು ಮಾಂಸ, ಹಾಲು, ಔಷಧ ಪೂರೈಕೆಗೆ ನಿರ್ಬಂಧ ಇರುವುದಿಲ್ಲ. ಇತರೆ ಅಂಗಡಿ ಮುಂಗಟ್ಟು, ಹೋಟೆಲ್, ಬಾರ್ ಗಳು ಜಿಲ್ಲೆಯಲ್ಲಿ ಮುಚ್ಚಿರುತ್ತದೆ. ಉಳಿದಂತೆ ಜಿಲ್ಲೆಯಲ್ಲಿ ಎಲ್ಲಾ ಖಾಸಗಿ ಸಾರ್ವಜನಿಕ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿಗದಿಯಾಗಿದ್ದ ಮದುವೆಗಳಿಗೆ ಷರತ್ತುಗಳೊಂದಿಗೆ ಅವಕಾಶ:

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಈ ಹಿಂದೆ ಭಾನುವಾರ ನಿಗದಿಯಾಗಿರುವ ಮದುವೆಗೆ ಅನುಮತಿ ನೀಡಲಾಗಿದೆ. ಸ್ಥಳೀಯ ಸಂಸ್ಥೆಯಿಂದ ಮದುವೆಗೆ ಅನುಮತಿ ಕಡ್ಡಾಯವಾಗಿದೆ. ಮದುವೆ ನಿಮಿತ್ತ ಪ್ರಯಾಣಿಸುವವರು ವಾಹನಗಳಿಗೆ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯುವುದು ಅಗತ್ಯವಾಗಿದೆ. ಅಲ್ಲದೆ ಸರಕಾರದ ಮಾರ್ಗಸೂಚಿಯಂತೆ ಮದುವೆ ನಡೆಸಲು ಆದೇಶ ನೀಡಲಾಗಿದೆ. ಇನ್ನುಳಿದಂತೆ ಜಿಲ್ಲೆಯಲ್ಲಿ ಇತರೆ ಯಾವುದೇ ಕಾರ್ಯಗಳು ನಡೆಯುವುದಿಲ್ಲ. ಜಿಲ್ಲೆ ಸಂಪೂರ್ಣ ಸ್ಥಬ್ದಗೊಳ್ಳಲಿದೆ.