Wednesday, January 22, 2025
ಸುದ್ದಿ

ವಿಟ್ಲ ಠಾಣಾ ಪೊಲೀಸ್ ಕಾನ್ಸ್ ಟೇಬಲ್ ಗೆ ಕೊರೊನಾ ಪಾಸಿಟಿವ್ ದೃಢ ; ಸಾರ್ವಜನಿಕರಲ್ಲಿ ಮನೆಮಾಡಿದ ಆತಂಕ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾನುವಾರ ಮತ್ತೆ ಒಂದು ಕೊರೋನಾ ಪಾಸಿಟಿವ್ ಕಂಡುಬಂದಿದೆ.
ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಕೋವಿಡ್ ವಾರಿಯರ್ಸ್ ಗೂ ಕೊರೋನಾ ತಟ್ಟಿದಂತಾಗಿದೆ. ಸೋಂಕಿತ ಪೊಲೀಸ್ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಪ್ರಕರಣದೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 66 ಕ್ಕೆ ಏರಿಕೆಯಾಗಿದೆ. ಮುಂಬೈನಿಂದ ಬಂದಿದ್ದ ವ್ಯಕ್ತಿ ಕ್ವಾರಂಟೈನ್ ಗೆ ಮುನ್ನ ವಿಟ್ಲ ಪೊಲೀಸ್ ಠಾಣೆಗೆ ಬಂದಿದ್ದು ಈತನಿಂದಲೇ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು