Thursday, January 23, 2025
ಸುದ್ದಿ

ಹಿಂದೂ ಜಾಗರಣಾ ವೇದಿಕೆ ಪುತ್ತೂರು ತಾಲೂಕು ಜವಾಬ್ದಾರಿ ಘೋಷಣೆ ; ಗೌರವಾಧ್ಯಕ್ಷ ಡಾ. ಎಂ.ಕೆ.ಪ್ರಸಾದ್, ಅಧ್ಯಕ್ಷ ಅಶೋಕ್, ಪ್ರ.ಕಾರ್ಯದರ್ಶಿ ಅವಿನಾಶ್ ಪುರುಷರಕಟ್ಟೆ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು: ಹಿಂದೂ ಜಾಗರಣಾ ವೇದಿಕೆ ತಾಲೂಕು ಗೌರವಾಧ್ಯಕ್ಷರಾಗಿ ಡಾ. ಎಂ.ಕೆ.ಪ್ರಸಾದ್, ಅಧ್ಯಕ್ಷರಾಗಿ ಅಶೋಕ್ ತ್ಯಾಗರಾಜನಗರ, ಉಪಾಧ್ಯಕ್ಷರಾಗಿ ಶಶಿಕಾಂತ್ ಕೋರ್ಟ್‌ರಸ್ತೆ, ಪ್ರಧಾನ ಕಾರ್ಯದರ್ಶಿಯಾಗಿ ಅವಿನಾಶ್ ಪುರುಷರಕಟ್ಟೆ, ಸಂಪರ್ಕಪ್ರಮುಖ್ ಆಗಿ ದಿನೇಶ್ ಪಂಜಿಗ, ಪ್ರಚಾರಪ್ರಮುಖ್ ಆಗಿ ಮನೋಜ್ ಉಡ್ಡಂಗಳ ಅವರು ಆಯ್ಕೆಗೊಂಡಿದ್ದಾರೆ.

ಮೇ 26ರಂದು ಬೆಳ್ತಂಗಡಿಯ ಊಂತನಾಜೆ ಎಂಬಲ್ಲಿ ನಡೆದ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಬೈಠೆಕ್‌ನಲ್ಲಿ ವಿಭಾಗ ಸಂಪರ್ಕ ಪ್ರಮುಖ್ ಪ್ರಕಾಶ್ ಕುಕ್ಕೆಹಳ್ಳಿ, ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಕಡಬ ನೂತನ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು. ಹಿಂಜಾವೇ ಜಿಲ್ಲಾ ಅಧ್ಯಕ್ಷ ಜಗದೀಶ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಅಜಿತ್ ರೈ ಹೊಸಮನೆ, ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ, ತಾಲೂಕು ನಿಕಟಪೂರ್ವ ಅಧ್ಯಕ್ಷ ಸಚಿನ್ ರೈ ಪಾಪೆಮಜಲು ಸೇರಿದಂತೆ ತಾಲೂಕು ಮಟ್ಟದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು