ಮಹಾರಾಷ್ಟ್ರ ಸೇರಿದಂತೆ 5 ರಾಜ್ಯಗಳಿಂದ 15 ದಿನ ಯಾರೂ ಕರ್ನಾಟಕಕ್ಕೆ ಬರುವಂತಿಲ್ಲ ; ಕೊರೊನಾ ಹರಡುತ್ತಿರುವ ಪಂಚ ರಾಜ್ಯಗಳಿಗೆ ರಾಜ್ಯ ಸರ್ಕಾರದಿಂದ ನಿರ್ಬಂಧ – ಕಹಳೆ ನ್ಯೂಸ್
ಬೆಂಗಳೂರು: ಮುಂದಿನ 15 ದಿನಗಳ ಕಾಲ ಕರ್ನಾಟಕಕ್ಕೆ ಐದು ರಾಜ್ಯಗಳಿಂದ ಬರುವ ವಿಮಾನಕ್ಕೆ ಮತ್ತು ಮೂರು ರಾಜ್ಯಗಳ ರಸ್ತೆ ಹಾಗೂ ರೈಲು ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಅವರು ಗುರುವಾರ ಹೇಳಿದ್ದಾರೆ.
ಇಂದು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಂದಿನ 15 ದಿನಗಳ ಕಾಲ ಮಹಾರಾಷ್ಟ್ರ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು ಮತ್ತು ಗುಜರಾತ್ ನಿಂದ ಬರುವವರಿಗೆ ನಿರ್ಬಂಧ ವಿಧಿಸಲಾಗಿದೆ ಎಂದರು.
ಗುಜರಾತ್, ಮಹಾರಾಷ್ಟ್ರ ಹಾಗೂ ತಮಿಳುನಾಡು ಸೇರಿದಂತೆ ಈ ಮೂರು ರಾಜ್ಯಗಳ ವಿಮಾನ, ರಸ್ತೆ ಮತ್ತು ರೈಲು ಸಂಚಾರವನ್ನು ನಿರ್ಬಂಧಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.