Recent Posts

Monday, January 20, 2025
ರಾಜಕೀಯಸುದ್ದಿ

ಬಿ.ಎಸ್ ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮೈಸೂರು, ಜೂ 01 : ಹೊರಗಿನ ಶಾಸಕರನ್ನು ಕರೆದುಕೊಂಡು ಬಂದು ಸರ್ಕಾರ ಉಳಿಸಿಕೊಳ್ಳುವ ಅಗತ್ಯವಿಲ್ಲ, ಸರ್ಕಾರ ಭದ್ರವಾಗಿದ್ದು ಯಾವುದೇ ರೀತಿಯ ಅಡೆತಡೆಗಳಿಲ್ಲದೇ ಮುಂದುವರಿಯಲಿದೆ. ಬಿ.ಎಸ್ ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಎಲ್ಲರೂ ಜೊತೆ ಊಟ ಮಾಡಿದ್ದಾರೆ ಅಂದರೆ ಅದನ್ನು ಪ್ರತ್ಯೇಕ ಸಭೆ ಎನ್ನಲು ಸಾಧ್ಯವಿಲ್ಲ. ನಾನು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇನೆ. ಅಭಿವೃದ್ಧಿ ದೃಷ್ಟಿಯಿಂದ ಸಭೆ ಸೇರಿದ್ದಾರೆ. ಅದೆಲ್ಲವನ್ನೂ ಪಕ್ಷ ವಿರೋಧಿ‌ ಚಟುವಟಿಕೆ ಎನ್ನಲು ಸಾಧ್ಯವಿಲ್ಲ. ಇನ್ನು ಸಭೆ ನಡೆಸಿದವರ್ಯಾರು ಯಾವುದೇ ಬೇಡಿಕೆ ಇಟ್ಟಿಲ್ಲ. ಅವರು ಯಾವುದೇ ರೀತಿ ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಇದನ್ನೇ ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ. ಅವರ ವಿರುದ್ದ ಯಾವುದೇ ಪಿತೂರಿ ನಡೆಯುತ್ತಿಲ್ಲ. ಯಡಿಯೂರಪ್ಪ ವಿರುದ್ಧ ಯಾರಿಗೂ ಯಾವುದೇ ಅಸಮಾಧಾನ ಇಲ್ಲ. ರಾಜ್ಯದಲ್ಲಿ ಉತ್ತಮ ಆಡಳಿತವಿದ್ದು ಅದನ್ನು ಸಮರ್ಥವಾಗಿ ಸಿಎಂ ಮುನ್ನಡೆಸುತ್ತಿದ್ದಾರೆ ಎಂದು ಪ್ರಶಂಸಿದರು.