ಬೆಂಗಳೂರು : ಪ್ರವಾಸಿಗರಿಗೆ ಕರ್ನಾಟಕ ಮೃಗಾಲಯ ಪ್ರಾಧಿಕಾರ ಸಿಹಿಸುದ್ದಿ ನೀಡಿದ್ದು , ರಾಜ್ಯದಲ್ಲಿ ಜೂನ್ 8 ರಂದು ಮೃಗಾಲಯಗಳನ್ನು ತೆರೆಯಲು ಸಿದ್ಧತೆ ನಡೆಸಲಾಗಿದೆ .
ಮೃಗಾಲಯಗಳನ್ನು ತೆರೆಯಲು ಸರ್ಕಾರ ಹಾಗೂ ಕರ್ನಾಟಕ ಮೃಗಾಲಯ ಪ್ರಾಧಿಕಾರ ಚಿಂತನೆ ನಡೆಸುತ್ತಿದ್ದು, ಈ ಕುರಿತು ಶೀಘ್ರದಲ್ಲಿಯೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿವೆ.
ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಥರ್ಮಲ್ ಸ್ಕ್ರಿನಿಂಗ್ ಕಡ್ಡಾಯ ಮಾಡಲಾಗಿದೆ. ಅಲ್ಲದೇ ಅವರು ತಮ್ಮೊಂದಿಗೆ ಯಾವುದೇ ವಸ್ತುಗಳನ್ನು ತರುವಂತಿಲ್ಲ. ಮೆಡಿಕೇಟ್ ಪುಟ್ ಮಾರ್ಟ್ ಮೂಲಕವೇ ಮೃಗಾಯಲಕ್ಕೆ ಪ್ರವೇಶಿಸಬೇಕು ಎಂದು ತಿಳಿಸಿದೆ. ಇನ್ನು 65 ವರ್ಷ ಮೇಲ್ಪಟ್ಟವರಿಗೆ ಮೃಗಾಲಯ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಮೃಗಾಲಯದ ಆವರಣದೊಳಗೆ ಉಗುಳಬಾರದು. ಪ್ರಾಣಿಗಳಿಗೆ ಆಹಾರ ನೀಡಬಾರದು. ಒಂದು ವೇಳೆ ಮಾರ್ಗಸೂಚಿ ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.