Breaking News : ಉಡುಪಿಯಲ್ಲಿ 204 , ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿಗೆ ಕೊರೊನಾ ಪಾಸಿಟಿವ್ ; ರಾಜ್ಯದಲ್ಲಿಂದು ಒಟ್ಟು 515 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್
ಬೆಂಗಳೂರು : ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರುನಾಡ ಪಾಲಿಗೆ ಇಂದು ನಿಜಕ್ಕೂ ಕರಾಳ ಶುಕ್ರವಾರವಾಗಿ ಮಾರ್ಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 515 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದ್ರಲ್ಲೂ ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ ಬರೋಬ್ಬರಿ 204 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಕರಾವಳಿಯಲ್ಲಿ ಕಳೆದೊಂದು ವಾರದಿಂದಲೂ ಆರ್ಭಟಿಸುತ್ತಿರುವ ಕೊರೊನಾ ಮಹಾಮಾರಿ ಉಡುಪಿಯಲ್ಲಿಂದು ಮತ್ತೆ ತನ್ನ ಕರಾಳ ಚಾಯೆಯನ್ನು ತೋರ್ಪಡಿಸಿದೆ. ಇಂದು ಒಂದೇ ದಿನ ಬರೋಬ್ಬರಿ 204 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 768ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 82 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 685 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಯಾದಗರಿಯಲ್ಲಿಯೂ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಇಂದು ಜಿಲ್ಲೆಯಲ್ಲಿ ಒಟ್ಟು 74 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಳಿದಂತೆ ವಿಜಯಪುರ 53, ಕಲಬುರಗಿ 42, ಬೀದರ್ 39, ಬೆಳಗಾವಿ 36, ಮಂಡ್ಯ 13, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 10, ಉತ್ತರ ಕನ್ನಡ 7, ಚಿಕ್ಕಬಳ್ಳಾಪುರ 3, ಹಾಸನ 3, ಧಾರವಾಡ 3, ಹಾವೇರಿ 2, ರಾಮನಗರ 2, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ ಹಾಗೂ ಕೋಲಾರ ಜಿಲ್ಲೆಗಳಲ್ಲಿ ತಲಾ ಒಂದೊಂದು ಕೊರೊನಾ ಪ್ರಕರಣ ದಾಖಲಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 4935ಕ್ಕೆ ಏರಿಕೆಯಾಗಿದೆ.