Wednesday, January 22, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 17, ಉಡುಪಿಯಲ್ಲಿ 13 ಮಂದಿಗೆ ಕೊರೊನಾ ಪಾಸಿಟಿವ್ ; ರಾಜ್ಯದಲ್ಲಿಂದು ಒಟ್ಟು 239 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು, ಜೂ 07 : ದ.ಕ ಜಿಲ್ಲೆಯಲ್ಲಿ ಜೂನ್ 7ರಂದು ಭಾನುವಾರ 17 ಕೊರೊನಾ ಪ್ರಕರಣ ಪತ್ತೆಯಾಗಿದ್ದರೆ, ಉಡುಪಿಯಲ್ಲಿ 13 ಕೊರೊನಾ ಪಾಸಿಟಿವ್‌‌ ಪ್ರಕರಣ ವರದಿಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 13 ಪಾಸಿಟಿವ್ ಪ್ರಕರಣಗಳಲ್ಲಿ ಎಲ್ಲರೂ ಮಹಾರಾಷ್ಟ್ರದಿಂದ ಆಗಮಿಸಿದ್ದು, ಇನ್ನೂ ಒಬ್ಬ ವ್ಯಕ್ತಿಯ ಸೋಂಕಿನ ಮೂಲವನ್ನು ಕಂಡುಹಿಡಿಯಲಾಗಿಲ್ಲ. ಸದ್ಯ ಜಿಲ್ಲೆಯಲ್ಲಿ 798 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ದ.ಕ. ಜಿಲ್ಲೆಯಲ್ಲಿ ಇಂದು 17 ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಎಲ್ಲರೂ ಮಹಾರಾಷ್ಟ್ರದಿಂದ ಮರಳಿದವರಾಗಿದ್ದರೆ. ಈ ನಡುವೆ ಜಿಲ್ಲೆಯಲ್ಲಿ 4 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 101 ಮಂದಿ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು