Thursday, January 23, 2025
ರಾಜಕೀಯಸುದ್ದಿ

ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ – ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯ ಸಭೆಗೆ ಬಿಜೆಪಿ ಟಿಕೆಟ್..! – ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ.

ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ ಆರ್‌ಎಸ್‌ಎಸ್ ಕಳುಹಿಸಿದ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಓಕೆ ಮಾಡಿತಾ ಎಂಬ ಪ್ರಶ್ನೆ ಎದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎರಡು ರಾಜ್ಯಸಭಾ ಸ್ಥಾನಗಳಿಗೆ ಸ್ಪರ್ಧೆ ಶುರುವಾಗಿತ್ತು. ಬೆಳಗಾವಿಯಿಂದ ಒಂದು ಸ್ಥಾನಕ್ಕೆ ಪ್ರಭಾಕರ್ ಕೋರೆ, ರಮೇಶ್ ಕತ್ತಿ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಏರ್ಪಟ್ಟಿತು. ಶಾಸಕ ಉಮೇಶ್ ಕತ್ತಿ ಬಂಡಾಯದ ಬಾವುಟ ಹಾರಿಸಿದ್ದರು. ಮತ್ತೊಂದು ಸ್ಥಾನಕ್ಕೆ ಮಂಗಳೂರು ಭಾಗದ ಉದ್ಯಮಿ ಪ್ರಕಾಶ್ ಶೆಟ್ಟಿ ಅವರ ಹೆಸರು ಫೈನಲ್ ಮಾಡಿ ಈ ಮೂವರಲ್ಲಿ ಇಬ್ಬರ ಹೆಸರನ್ನು ಪ್ರಕಟಿಸುವಂತೆ ಕೇಂದ್ರ ಚುನಾವಣಾ ಸಮಿತಿಗೆ ರಾಜ್ಯ ನಾಯಕರು ಮನವಿ ಮಾಡಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಮಾತ್ರ ಅಚ್ಚರಿಯ ಅಭ್ಯರ್ಥಿಗಳ ಆಯ್ಕೆ ಮಾಡುವ ಮೂಲಕ ರಾಜ್ಯ ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದೆ.

ರಾಯಚೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾಗಿರುವ ಅಶೋಕ್ ಗಸ್ತಿ ಯಡಿಯೂರಪ್ಪ ವಿರುದ್ಧ ತಿರುಗಿ ಬಿದ್ದಿದ್ದರು. ರಾಯಣ್ಣ ಬ್ರಿಗೇಡ್ ಚಟುವಟಿಕೆ ವೇಳೆ ಯಡಿಯೂರಪ್ಪ ವಿರುದ್ಧ ಬರೆದ ಪತ್ರದಲ್ಲಿ ಸಹಿ ಹಾಕಿದ್ದರು. ಈರಣ್ಣ ಕದಡಿ ಅರಭಾವಿ ವಿಧಾನಸಭೆ 1994 ರಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ವಿ.ಎಸ್ ಕೌಜಲಗಿ ವಿರುದ್ಧ ಸ್ಪರ್ಧೆ ಮಾಡಿದ್ದರು.

ಅಶೋಕ್ ಗಸ್ತಿ ಸವಿತಾ ಸಮಾಜದವರಾಗಿದ್ದು, ಈರಣ್ಣ ಕಡಾಡಿ ಲಿಂಗಾಯತರಾಗಿದ್ದಾರೆ. ಬಿಜೆಪಿ ಹೈಕಮಾಂಡ್ ಈ ರೀತಿ ಬಿಜೆಪಿ ನಾಯಕರಿಗೆ ಶಾಕ್ ನೀಡುವುದು ಇದೇ ಮೊದಲೆನಲ್ಲ. ಈ ಹಿಂದೆ ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಅಭ್ಯರ್ಥಿಯ ವೇಳೆ ಬಿಜೆಪಿ ನಾಯಕರು ನಿರೀಕ್ಷೆ ಮಾಡದೇ ಇದ್ದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿತ್ತು.