Sunday, November 24, 2024
ಸುದ್ದಿ

ಮಂಗಳೂರಿನಲ್ಲಿ ಕೆಐಎಡಿಬಿ ಅಧಿಕಾರಿ ದಾಸೇಗೌಡ ಮನೆ ಮೇಲೆ ಎಸಿಬಿ ದಾಳಿ ; ಅಪಾರ ಆಸ್ತಿಪಾಸ್ತಿ ಪತ್ತೆ – ಕಹಳೆ ನ್ಯೂಸ್

ಮಂಗಳೂರು, ಜೂ 12 : ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಲ್ಲಿ ಏಕ ಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

 

 

ಲಂಚ ಸ್ವೀಕಾರ ಹಾಗೂ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದಡಿ, ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ ದಾಸೇಗೌಡ ವಾಸವಾಗಿದ್ದ ಅಪಾರ್ಟ್ಮೆಂಟ್ ನಲ್ಲಿ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಡಿ.19 ರಂದು 5 ಲಕ್ಷ ಲಂಚ ಸ್ವೀಕರಿಸಿ ದಾಸೇಗೌಡ ಎಸಿಬಿ ಬಲೆಗೆ ಬಿದ್ದಿದ್ದರು. ಆದರೆ ಈ ನಡುವೆ ಮಂಗಳೂರಿನಲ್ಲಿ ಉಂಟಾದ ಹಿಂಸಾಚಾರ. ಗೋಲಿಬಾರ್ ಮತ್ತು ಕೊರೊನ ಸಾಂಕ್ರಮಿಕ ರೋಗದ ಹಿನ್ನಲೆಯಲ್ಲಿ ಕಾರ್ಯಾಚರಣೆ ಭ್ರಷ್ಟಾಚಾರ ನಿಗ್ರಹ ದಳ ಮುಂದೂಡಿತ್ತು.

ಲಂಚ ಸ್ವೀಕಾರ ಆರೋಪದಡಿ ಅಮಾನತ್ತಿನಲ್ಲಿರುವ ದಾಸೇಗೌಡ ಅವರ ಬಳಿ ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿಪಾಸ್ತಿ ಪತ್ತೆಯಾಗಿದೆ. ಮಂಗಳೂರಿನಲ್ಲಿ ಒಂದು ಫ್ಲಾಟ್ ಸೇರಿ ಮೂರ್ನಾಲ್ಕು ಮನೆ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ಕಡೆ 11 ಸೈಟ್ ಹಾಗೂ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿದೆ.

ಎಸಿಬಿ ಎಸ್ಪಿ ಉಮಾಪ್ರಶಾಂತ್, ಡಿವೈಎಸ್ಪಿ ಮಂಜುನಾಥ್, ಇನ್ಸ್ ಪೆಕ್ಟರ್ ಯೋಗೀಶ್ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.