Saturday, November 23, 2024
ಸುದ್ದಿ

ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಕೇರಳ : ವಿವಿಧ ನಾಯಕರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ..ಇದೀಗ ಬಂದ ವರದಿಯ ಪ್ರಕಾರ ಗುರುವಾರ ಮುಂಜಾನೆ ದುಷ್ಕರ್ಮಿಗಳು ಕೇರಳದಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ .

ಕೇರಳದ ಕಣ್ಣೂರು ಜಿಲ್ಲೆಯ ತಾಲಿಪರಂಬದ ತಾಲ್ಲೂಕು ಕಚೇರಿಯ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆಗೆ ದುಷ್ಕರ್ಮಿಗಳು ಪ್ರತಿಮೆಗೆ ಕಲ್ಲು ತೂರಾಟ ನಡೆಸಿದ್ದು ಕಾರಣ ಹಾನಿಗೀಡಾಗಿದೆ ಎನ್ನಲಾಗಿದೆ ಘಟನೆ ಗುರುವಾರ ಬೆಳಗಿನ ಜಾವ ಸುಮಾರು 7 ಗಂಟೆಗೆ ಸಂಭವಿಸಿದ್ದು .ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಗಳ ಪತ್ತೆಗೆ ಬಲೆ ಬಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಮ್ಯುನಿಸ್ಟ್ ನಾಯಕ ಲೆನಿನ್ ಅವರ ಎರಡು ಪ್ರತಿಮೆ ಹಾಗೂ ತಮಿಳುನಾಡಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ಧ್ವಂಸ ಪ್ರಕರಣದ ಬೆನ್ನಲ್ಲೇ ಕೋಲ್ಕತಾದ ಕಾಳಿಘಾಚ್ ನಲ್ಲಿರುವ ಶ್ಯಾಮ್ ಪ್ರಸಾದ್ ಮುಖರ್ಜಿ ಪ್ರತಿಮೆಯನ್ನೂ ಧ್ವಂಸ ಮಾಡಲಾಗಿತ್ತು .ಇದೀಗ ರಾಷ್ಟ್ರ ಪಿತ ಮಹಾತ್ಮಾ ಗಾಂಧಿ ಅವರ ಪ್ರತಿಮೆಗೆ ಹಾನಿ ಆಗಿದ್ದು ಒಂದು ದೊಡ್ಡ ದುರಂತವೆಂದೇ ಎನ್ನಬಹುದು .