Sunday, November 24, 2024
ಸುದ್ದಿ

ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸರ್‌ನಿಂದ ಶುದ್ಧತೆ-ಕಹಳೆ ನ್ಯೂಸ್

ಪುತ್ತೂರು: ಕಳೆದ ಮಾರ್ಚ್ ೨೩ರಂದು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯು ಕೋರೊನಾದಿಂದಾಗಿ ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾದ ಪರಿಣಾಮವಾಗಿ ಪರೀಕ್ಷೆಗೆ ತೊಡಕು ಉಂಟಾಗಿತ್ತು ಮಾತ್ರವಲ್ಲದೆ ಕೊನೆಯ ಪರೀಕ್ಷೆಗೆ ವಿದ್ಯಾರ್ಥಿಗಳು ಉತ್ತಮ ರೀತಿಯಲ್ಲಿ ಸಿದ್ಧತೆಯನ್ನು ಕೂಡ ನಡೆಸಿದ್ದರು. ಆದರೆ ಸಂಪೂರ್ಣ ಭಾರತ ಆ ಸಂದರ್ಭದಲ್ಲಿ ಲಾಕ್‌ಡೌನ್ ಸಮಸ್ಯೆಯನ್ನು ಎದುರಿಸಿದ ಸಂದರ್ಭದಲ್ಲಿ ಇಂಗ್ಲಿಷ್ ಪರೀಕ್ಷೆಯನ್ನು ಕಡ್ಡಾಯವಾಗಿ ಮುಂದೂಡಬೇಕಾದ ಸಂಧಿಗ್ದ ಪರಿಸ್ಥಿತಿ ನಿರ್ಮಾಣವಾಗಿತ್ತು.


ಇದೀಗ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯು ಪರೀಕ್ಷೆ ಯನ್ನು ನಡೆಸಲು ಅನುಮತಿ ನೀಡಿದ್ದು ಜೂನ್ ೧೮ರಂದು ರಾಜ್ಯಾದ್ಯಂತ ಈಗಾಗಲೇ ಸೂಚಿಸಿದ ಪರೀಕ್ಷಾ ಕೇಂದ್ರ ಗಳಲ್ಲಿ ಪರೀಕ್ಷೆಗಳು ನಡೆಯಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅದೇ ರೀತಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕೂಡ ಪರೀಕ್ಷೆಯು ನಡೆಯಲಿರುವುದರಿಂದ ಎಲ್ಲಾ ತರಗತಿ ಕೊಠಡಿಗಳಿಗೆ, ಹೊರಾಂಗಣಗಳಿಗೆ ಸ್ಯಾನಿಟೈಸರ್‌ನ್ನು ಯಂತ್ರದ ಮೂಲಕ ಸಿಂಪಡಿಸಿ ಶುದ್ಧತೆಗೊಳಿಸುವ ಕಾರ್ಯವನ್ನು ಕೈಗೊಳ್ಳಲಾಗಿದೆ.ಅಲ್ಲದೆ ಮಾಸ್ಕ್ , ಪ್ರತಿಯೊಬ್ಬ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ತೋರಿಸುವ ಥರ್ಮೋಮೀಟರ್‌ನ್ನು ಕಾಲೇಜಿನಲ್ಲಿ ಅಳವಡಿಸಲಾಗಿದೆ.

ಪ್ರಾಂಶುಪಾಲ ಮಹೇಶ್ ನಿಟಿಲಾಪುರರವರ ನೇತೃತ್ವದಲ್ಲಿ ಕಾಲೇಜು ಆಡಳಿತ ವಿಭಾಗದ ಸಿಬ್ಬಂದಿಗಳು ಶುದ್ಧತೆಯ ಕಾರ್ಯದಲ್ಲಿ ಕೈಜೋಡಿಸಿದ್ದಾರೆ.ಒಟ್ಟು 832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿದ್ದು 39 ಕೊಠಡಿಗಳನ್ನು ಸಿದ್ಧತೆಗೊಳಿಸಲಾಗಿದೆ.

ಕಾಲೇಜಿನ ಕೆಲವು ವಿದ್ಯಾರ್ಥಿಗಳು ಅವರವರ ಜಿಲ್ಲೆಯಲ್ಲಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಲಾಗಿದೆ.