Recent Posts

Sunday, January 19, 2025
ಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 79 ಮಂದಿಗೆ ಕೊರೊನಾ ಸೋಂಕು ಧೃಢ ; ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು : ಕರಾವಳಿಯಲ್ಲಿ ಮತ್ತೆ ಕೊರೊನಾ ಆರ್ಭಟಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಬರೋಬ್ಬರಿ 79 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಲ್ಲದೇ ರಾಜ್ಯಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ರಾಜ್ಯದಲ್ಲಿಂದು 317 ಮಂದಿಗೆ ಕೊರೊನಾ ಸೋಂಕಿರುವುದು ಖಚಿತವಾಗಿದ್ದು ಸೋಂಕಿತರ ಸಂಖ್ಯೆ 7530ಕ್ಕೆ ಏರಿಕೆಯಾಗಿದೆ.

ಕಳೆದ ಹಲವು ದಿನಗಳಿಂದಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಕಡಿಮೆಯಾಗಿತ್ತು. ಆದ್ರೆ ಇಂದು ಒಂದೇ ದಿನ 79 ಮಂದಿಗೆ ಸೋಂಕು ದೃಢಪಟ್ಟಿದೆ. ವಿದೇಶದಿಂದ ಬಂದಿದ್ದವರಲ್ಲಿಯೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 370ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉಳಿದಂತೆ ಧಾರವಾಡ 8, ಉಡುಪಿ 7, ಶಿವಮೊಗ್ಗ 7, ಯಾದಗಿರಿ 6, ರಾಯಚೂರು 6, ಉತ್ತರ ಕನ್ನಡ 6, ಹಾಸನ 5, ವಿಜಯಪುರ 4, ಮೈಸೂರು 4, ಗದಗ 4, ರಾಮನಗರ 4, ಚಿಕ್ಕಮಗಳೂರು 4, ಕೊಪ್ಪಳ 4, ಬೆಳಗಾವಿ3, ಬೀದರ್ 2 ಹಾಗೂ ತುಮಕೂರು ಜಿಲ್ಲೆಯಲ್ಲಿ ಓರ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು