Sunday, January 19, 2025
ಸುದ್ದಿ

ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ಕೊರೊನಾಗೆ ಬಲಿ – ಕಹಳೆ ನ್ಯೂಸ್

ನವದೆಹಲಿ, ಜೂ 16 : ಮಹಾವೀರ ಚಕ್ರ ಪ್ರಶಸ್ತಿ ವಿಜೇತ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ ಮೋಹನ್ ವೋಹ್ರಾ ಹೃದಯನಾಳಕ್ಕೆ ಸಂಬಂಧಿಸಿದ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಿದಾಗ ಪಾಸಿಟಿನ್ ಬಂದಿತ್ತು. ಇನ್ನು ಅವರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದು, ಜೂನ್ 14ರಂದು ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಭಾನುವಾರ ಅವರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಹಾವೀರ ಚಕ್ರ ದೇಶದ 2ನೇ ಅತ್ಯುನ್ನತ ಸೈನಿಕ ಪ್ರಶಸ್ತಿಯಾಗಿದ್ದು, ಯುದ್ಧ ಭೂಮಿಯಲ್ಲಿ ಅಪ್ರತಿಮ ಶೌರ್ಯ ಮೆರೆದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 1972ರಲ್ಲಿ ಲೆಫ್ಟಿನೆಂಟ್ ಜನರಲ್ ರಾಜ್ ಮೋಹನ್ ವೊಹ್ರಾ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು.