Breaking News : 3 ಮಂದಿ ಅಲ್ಲ, ಕನಿಷ್ಠ 20 ಮಂದಿ ಭಾರತೀಯ ಸೈನಿಕರು ಹುತಾತ್ಮ : ಗಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣ..!? – ಕಹಳೆ ನ್ಯೂಸ್
ನವದೆಹಲಿ: ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವಿನ ಮಲ್ಲಯುದ್ಧದಲ್ಲಿ ಭಾರತದ ಮೂವರು ಯೋಧರು ಹತ್ಯೆಯಾಗಿದ್ದು ಸಂಚಲನ ಮೂಡಿಸಿತ್ತು. ಇದೀಗ ಚೀನಾ ಕಡೆಯೂ ಸಾವು-ನೋವು ಸಂಭವಿಸಿದೆ ಎಂದು ವರದಿಯಾಗಿದೆ.
ಉಭಯ ದೇಶದ ಯೋಧರ ನಡುವಿನ ಸಂಘರ್ಷದಲ್ಲಿ ಭಾರತೀಯ ಸೇನೆಯ ಕರ್ನಲ್ ಮತ್ತು ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಇದೇ ವೇಳೆ ಚೀನಾದ ಕಡೆಯೂ ಸಾವು ನೋವು ಸಂಭವಿಸಿದೆ. ಇದೇ ವೇಳೆ ಉಭಯ ದೇಶಗಳ ನಡುವಿನ ಸೈನಿಕರು ಗುಂಡಿನ ದಾಳಿ ನಡೆಸಿಲ್ಲ. ಬದಲಿಗೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.
ಚೀನಾದ ಗ್ಲೋಬಲ್ ಟೈಮ್ಸ್ ಪತ್ರಿಕೆಯ ಹಿರಿಯ ವರದಿಗಾರ್ತಿ ವಾಂಗ್ ವೆನ್ವೆನ್ ಎಂಬುವರು ಟ್ವೀಟ್ ಮಾಡಿ ಕಳೆದ ರಾತ್ರಿ ಭಾರತ ಮತ್ತು ಚೀನಾ ಯೋಧರ ನಡುವಿನ ಸಂಘರ್ಷದಲ್ಲಿ ಐವರು ಚೀನಾದ ಸೈನಿಕರು ಹತ್ಯೆಯಾಗಿದ್ದು 11 ಜನ ಗಾಯಗೊಂಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು.
ಇದೀಗ ಭಾರತದ ಸುದ್ದಿ ವಾಹಿನಿ ANI ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ ಎಂಬ ಆತಂಕಕಾರಿ ಸುದ್ದಿಯನ್ನು ಟ್ವೀಟ್ ಮಾಡಿದೆ. ಏನೀದೆ ANI ಟ್ವೀಟ್ಟ್ ನಲ್ಲಿ…!?
At least 20 Indian soldiers killed in the violent face-off with China in Galwan valley in Eastern Ladakh. Casualty numbers could rise: Government Sources pic.twitter.com/PxePv8zGz4
— ANI (@ANI) June 16, 2020