ನಟ ಸುಶಾಂತ್ ಆತ್ಮಹತ್ಯೆ ಪ್ರಕರಣ ; ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ಕೇಸು ದಾಖಲು – ಕಹಳೆ ನ್ಯೂಸ್
ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಸೆಲೆಬ್ರಿಟಿಗಳ ವಿರುದ್ಧ ವಕೀಲ ಸುಧಿರ್ ಕುಮಾರ್ ಓಜಾ ಮುಜಾಫರ್ಪುರ್ ನ್ಯಾಯಾಲಯದಲ್ಲಿ ದೂರು ದಾಖಲಸಿದ್ದಾರೆ.
ಏಳು ಸಿನಿಮಾಗಳಿಂದ ಸುಶಾಂತ್ ಅವರನ್ನು ಕೈ ಬಿಡಲಾಗಿತ್ತು. ಜೊತೆಗೆ ಕೆಲ ಸಿನಿಮಾಗಳು ಬಿಡುಗಡೆ ಆಗಿಲ್ಲ. ಈ ಎಲ್ಲ ಘಟನೆಗಳು ಸುಶಾಂತ್ ಅವರಿಗೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರಿಂದ ನಟ ಇಂತಹ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ವಕೀಲ ಓಜಾ ಆರೋಪಿಸಿದ್ದಾರೆ.
ಬಾಲಿವುಡ್ ಸಿನಿಮಾ ನಿರ್ದೇಶಕರಾದ ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ನಿರ್ಮಾಪಕಿ ಏಕ್ತಾ ಕಪೂರ್ ಮತ್ತು ನಟ ಸಲ್ಮಾನ್ ಖಾನ್ ಸೇರಿದಂತೆ ಎಂಟು ಜನರ ವಿರುದ್ಧ ಐಪಿಸಿ ಸೆಕ್ಸನ್ 306, 109, 504 ಮತ್ತು 506 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.
ಭಾನುವಾರ ಬೆಳಗ್ಗೆ 9.30ಕ್ಕೆ ಜ್ಯೂಸ್ ಕುಡಿದು ತನ್ನ ಕೋಣೆ ಸೇರಿದ್ದ ಸುಶಾಂತ್ ಸಿಂಗ್ ರಜಪೂತ್, ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಈ ವೇಳೆ ಮನೆಯಲ್ಲಿ ಅಡುಗೆ ಕೆಲಸದವ, ಮ್ಯಾನೇಜರ್ ಮತ್ತು ಓರ್ವ ಗೆಳೆಯನಿದ್ದ. ಸೋಮವಾರ ಸಂಜೆ ಸುಶಾಂತ್ ಅಂತ್ಯಕ್ರಿಯೆ ಮುಂಬೈನ ವಿಲೆ ಪಾರ್ಲೆಯ ಸೇವಾ ಸಮಾಜದಲ್ಲಿ ನಡೆಯಿತು. ಕೊರೊನಾ ಹಿನ್ನೆಲೆಯಲ್ಲಿ ಕುಟುಂಬ ಮತ್ತು ಆಪ್ತರಿಗೆ ಅಂತಿಮ ವಿಧಿ ವಿಧಾನಗಳಲ್ಲಿ ಅನುಮತಿ ನೀಡಲಾಗಿತ್ತು. ಮಾನಸಿಕ ಖಿನ್ನತೆಗೊಳಗಾಗಿದ್ದರಿಂದ ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕೈ ಪೋ ಚೆ ಸಿನಿಮಾ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದ ಸುಶಾಂತ್‍ಗೆ ಧೋನಿ ಸಿನಿಮಾ ದೊಡ್ಡ ಬ್ರೇಕ್ ನೀಡಿತ್ತು. 10ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಸುಶಾಂತ್ ಅವರನ್ನು ಬಾಲಿವುಡ್ ತಾರತಮ್ಯದಿಂದ ನೋಡಲಾಗುತ್ತಿತ್ತು ಎಂಬ ಸುದ್ದಿ ಹರಿದಾಡಿತ್ತು. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಬಾಲಿವುಡ್‍ನಲ್ಲಿ ತಾರತಮ್ಯದ ಜನರು ಪ್ರಶ್ನೆ ಎತ್ತುತ್ತಿದ್ದಾರೆ. ಸುಶಾಂತ್‍ನನ್ನು ಮಾನಸಿಕವಾಗು ಕುಗ್ಗಿಸಿ ಆತ ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರಚೋದಿಸಲಾಯ್ತು. ಇದು ಸೂಸೈಡ್ ಅಲ್ಲ, ಪೂರ್ವ ನಿಯೋಜಿತ ಕೊಲೆ ಎಂದು ನಟ ಕಂಗನಾ ರಣಾವತ್ ಆರೋಪಿಸಿದ್ದರು.