Saturday, November 23, 2024
ದಕ್ಷಿಣ ಕನ್ನಡಪುತ್ತೂರು

” ಚೀನಾ ನರಿ ಬುದ್ದಿಗೆ ಭಾರತ ತಕ್ಕ ಉತ್ತರ ಕೊಡಲಿದೆ ” – ಪುತ್ತೂರಿನಲ್ಲಿ ಹುತಾತ್ಮ ಭಾರತೀಯ ಯೋಧರಿಗೆ ಅಮರ್ ಜವಾನ್ ಜ್ಯೋತಿ ಬಳಿ ಬಿಜೆಪಿ ಶ್ರದ್ಧಾಂಜಲಿ ; ಪ್ರಧಾನಿ ನಡೆ ಸಮರ್ಥನೆ, ಶ್ಲಾಘನೆ – ಕಹಳೆ ನ್ಯೂಸ್

ಪುತ್ತೂರು : ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿವರಿಗೆ ಬೆಂಬಲವಾಗಿ ನಾವು ಚೀನಾ ವಿರೋಧವನ್ನು ಕೇವಲ ಮಾತಿನಲ್ಲಿ ಹೇಳದೆ ಕೃತಿಯಲ್ಲೂ ಮಾಡಿ ತೋರಿಸಬೇಕು. ಚೀನಾ ವಸ್ತುಗಳನ್ನು ಬಹಿಷ್ಕರಿಸಬೇಕೆಂದು ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜೂ.೧೬ರಂದು ಗಡಿಯಲ್ಲಿ ಚೀನಾದೊಂದಿಗೆ ನಡೆದ ಘರ್ಷನೆಯಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಇಲ್ಲಿನ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಬಿಜೆಪಿ ವತಿಯಿಂದ ಯೋಧ ನಮನದಲ್ಲಿ ಸ್ಮಾರಕದಲ್ಲಿ ಪುಷ್ಪಾರ್ಚನೆಗೈದು ಅವರು ಮಾತನಾಡಿದರು. ಕೇವಲ ಚೀನಾ ಮಾತ್ರವಲ್ಲ ಭಾರತವನ್ನು ಹಿಮ್ಮೆಟ್ಟಿಸುವ ತಂತ್ರ ಹೂಡಿದ ಯಾವುದೇ ದೇಶ ಇರಲಿ ಅವೆಲ್ಲವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಇವತ್ತು ಭಾರತ ಒಂದು ಶಕ್ತಿ ಶಾಲಿ ರಾಷ್ಟ್ರವಾಗಿದೆ. ಇದನ್ನು ಸಹಿಸಲಾರದ ಚೀನಾ ತನ್ನ ಕುತಂತ್ರ ಬುದ್ದಿ ತೋರಿಸುತ್ತಿದೆ. ನಾವು ಕೂಡಾ ಚೀನಾದ ವಸ್ತುಗಳು, ಆಹರೋತ್ಪನ್ನಗಳನ್ನು ಬಹಿಷ್ಕರಿಸಬೇಕು. ಇದನ್ನು ನಾವು ಮಾಡಿ ತೋರಿಸಬೇಕೆಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಧಾನಿ ನರೇಂದ್ರ ಮೋದಿವಯರು ಭಾರತದ ಒಂದು ಮಣ್ಣಿನ ಕಣವನ್ನು ಬಿಟ್ಟುಕೊಡುವುದಿಲ್ಲ – ಹೇರಳೆ

ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಅವರು ಮಾತನಾಡಿ ಚೀನಾದ ಕುತಂತ್ರ ನೀತಿಗೆ ಸಂಬಂಧಿಸಿ ಭಾರತ ಒಂದು ಮಣ್ಣು ಬಿಟ್ಟು ಕೊಡುವುದಿಲ್ಲ ಎಂದು ನರೇಂದ್ರ ಮೋದಿಯವರು ಸ್ಪಷ್ಟ ಪ್ರತಿಜ್ಞೆ ಮಾಡಿದ್ದಾರೆ. ಅಂತಹ ಸಂದರ್ಭದಲ್ಲಿ ಪ್ರಧಾನಿಗೆ ಬೆಂಬಲವಾಗಿ ನಾವುಕೂಡಾ ಚೀನಾ ವಸ್ತುಗಳನ್ನು ನಿಷೇಧಿಸುವ ಜೊತೆಗೆ ನಮ್ಮಿಂದ ಏನು ತ್ಯಾಗ ಮಾಡಲು ಸಾಧ್ಯವೋ ಅದಕ್ಕೆ ತಕ್ಕಂತೆ ಪ್ರತಿಜ್ಞೆ ಮಾಡಬೇಕು ಎಂದು ಹೇಳಿದ ಅವರು ಜಗತ್ತಿನಲ್ಲಿ ಭಾರತ ಪರಮವೈಭವಕ್ಕೆ ಹೋಗುತ್ತಿದೆ. ಈ ನಡುವೆ ಕೊರೋನಾದಿಂದಲೂ ಅತ್ಯಂತ ಯಶಸ್ವಿಯಾಗಿ ಗೆಲುವು ಸಾಧಿಸಿದೆ. ಇದನ್ನು ಸಹಿಸದ ಚೀನಾ ನೆರೆ ದೇಶಗಳನ್ನು ಭಾರತ ವಿರುದ್ಧ ಎತ್ತಿ ಕಟ್ಟಿ ಪರೋಕ್ಷವಾಗಿ ಹೋರಾಟ ಮಾಡುತ್ತಿದೆ. ಆದರೆ ಚೀನಾದ ಕುತಂತ್ರ ಬುದ್ದಿ ತಿಳಿದ ಜಗತ್ತಿನ ೧೨೩ ರಾಷ್ಟ್ರಗಳು ಭಾರತಕ್ಕೆ ಬೆಂಬಲ ನೀಡುತ್ತಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿವಯರು ಭಾರತದ ಒಂದು ಮಣ್ಣು ಬಿಟ್ಟುಕೊಡುವುದಿಲ್ಲ ಎಂದು ಸ್ಪಷ್ಟ ಪ್ರತಿಜ್ಞೆ ಮಾಡಿದ್ದಾರೆ. ಹಾಗಾಗಿ ನಾವು ಕೂಡಾ ಪ್ರಧಾನಿಯವರಿಗೆ ಬೆಂಬಲ ನೀಡಲು ನಾವು ಕೂಡಾ ಚೀನಾ ವಸ್ತುಗಳನ್ನು ನಿಷೇಧಿಸುವ ಪ್ರತಿಜ್ಞೆ ಮತ್ತು ಯಾವುದೇ ಸಂದರ್ಭದಲ್ಲೂ ತ್ಯಾಗ ಮಾಡಲು ಸಿದ್ದರಿಬೇಕೆಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರಕ್ಕೆ ಬೆಂಬಲ ಎಂದ ಆಳ್ವ :

ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಚೀನಾದ ವಿಚಾರದಲ್ಲಿ ಪ್ರಧಾನಿಯವರು ಸೇನಾ ಸಮರ, ಆರ್ಥಿಕ ಸಂಘರ್ಷ, ವಿಶ್ವ ರಾಷ್ಟ್ರದ ಬೆಂಬಲ ಎಂಬ ಮೂರು ಕಾರ್ಯಗಳನ್ನು ಕೈಗೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇರಬೇಕೆಂದು ಹೇಳಿದರು. ಯೋಧ ನಮನದ ಕೊನೆಯಲ್ಲಿ ಒಂದು ನಿಮಿಷದ ಮೌನ ಪ್ರಾರ್ಥನೆಯೊಂದಿಗೆ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಳಿಕ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಪಕ್ಷದ ಪ್ರಮುಖರು, ಕಾರ್ಯಕರ್ತರು ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಕಾರ್ಯದರ್ಶಿ ಜಯಂತಿ ನಾಯಕ್, ಬಿಜೆಪಿ ಹಿಂದುಳಿದ ಮೋರ್ಛಾದ ಜಿಲ್ಲಾ ಅಧ್ಯಕ್ಷ ಆರ್.ಸಿ.ನಾರಾಯಣ್, ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ನಿತೀಶ್ ಕುಮಾರ್ ಶಾಂತಿವನ ಸೇರಿದಂತೆ ಪಕ್ಷದ ಇತರ ಪದಾಧಿಕಾರಿಗಳು, ಕಾರ್ಯಕರ್ತರು, ನಗರಸಭಾ ಸದಸ್ಯರು, ತಾ.ಪಂ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಕಾರ್ಯಕ್ರಮ ನಿರೂಪಿಸಿದರು.