Sunday, January 19, 2025
ದಕ್ಷಿಣ ಕನ್ನಡಪುತ್ತೂರು

ಪುತ್ತೂರಿನಲ್ಲಿ ಬಿಜೆಪಿ ಯುವ ಮೋರ್ಚಾದಿಂದ ಹುತಾತ್ಮ ಯೋಧರಿಗೆ ನಮನ ; ಹಣತೆ ಹಚ್ಚಿ, ತಾಯಿ ಭಾರತಮಾತೆಗೆ ಪುಷ್ಪಾರ್ಚನೆ – ಕಹಳೆ ನ್ಯೂಸ್

ಪುತ್ತೂರು: ಲಾಡಕ್‌ನ ಗಡಿಯಲ್ಲಿ ಹುತಾತ್ಮರದ ಯೋಧರಿಗೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಣತೆ ಹಚ್ಚಿ, ಭಾರತ ಮಾತೆಯ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜೂ. 18ರಂದು ಸಂಜೆ ನಡೆಯಿತು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಪುತ್ತೂರು ನಗರ ಮಂಡಲದ ಅಧ್ಯಕ್ಷ ಪಿ. ಜಿ. ಜಗನ್ನಿವಾಸ್ ರಾವ್ ಪ್ರಧಾನ ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಬಿಜೆಪಿ ನಗರ ಮಂಡಲದ ಉಪಾಧ್ಯಕ್ಷ ಇಂದು ಶೇಖರ್, ಶಿವಕುಮಾರ್, ಪುತ್ತೂರು ಬಿಜೆಪಿ ಸಾಮಾಜಿಕ ಜಾಲ ತಾಣದ ಪ್ರಮುಖ್ ಸಂದೀಪ್ ಲೋಬೊ ಉಪಸ್ಥಿತರಿದ್ದರು. ಪುತ್ತೂರು ನಗರ ಮಂಡಲ ಯುವ ಮೋರ್ಚಾದ ಅಧ್ಯಕ್ಷ ಸಚಿನ್ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ತೇಜಸ್ ಕೊಂಬೆಟ್ಟುರವರು ಚೀನಾ ವಸ್ತುಗಳ ಬಹಿಷ್ಕಾರ ಕುರಿತು ಪ್ರಮಾಣ ವಚನ ಬೋಧಿಸಿದರು. ಇದೇ ಸಂದರ್ಭಲ್ಲಿ ಹುತಾತ್ಮ ಯೋಧರಿಗೆ ಚಿರಶಾಂತಿ ಲಭಿಸಲಿ ಎಂದು ಒಂದು ನಿಮಿಷದ ಮೌನ ಪ್ರಾರ್ಥನೆ ಮಾಡಲಾಯಿತು. ಯುವ ಮೋರ್ಚಾದ ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು