Sunday, January 19, 2025
ಸುದ್ದಿ

ಪುತ್ತೂರು: ಬನ್ನೂರಿನ ಪ್ರಜ್ಞಾ ಮಕ್ಕಳ ಕೇಂದ್ರದಲ್ಲಿ ವಿಶಿಷ್ಟ ರೀತಿಯಲ್ಲಿ ರಾಹುಲ್ ಗಾಂಧಿ ಹುಟ್ಟುಹಬ್ಬ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಎ.ಐ.ಸಿ.ಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟುಹಬ್ಬವನ್ನು ನಿನ್ನೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಿನ್ನೆ ಬನ್ನೂರಿನ ಪ್ರಜ್ಞಾ ನಿಲಯದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಬನ್ನೂರಿನ ಪ್ರಜ್ಞಾ ಮಾನಸಿಕ ಕೇಂದ್ರದಲ್ಲಿ ವಿಶಿಷ್ಟ ಮಕ್ಕಳಿಗೆ ಹಣ್ಣು ಹಂಪಲು ನೀಡುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಈ ವೇಳೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ಬಡಗನ್ನೂರ್ ಅವರು ಮಾತನಾಡಿ ರಾಹುಲ್ ಗಾಂಧಿ ಅವರು ತನ್ನ ಹುಟ್ಟುಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಆದೇಶ ನೀಡಿದುದರಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕಿ ಶಕುಂತಲಾ ಟಿ. ಶೆಟ್ಟಿ, ಮುರಳೀಧರ್ ರೈ ಮಟನ್ತಬೆಟ್ಟು, ಸೂತ್ರಬೆಟ್ಟು ಜಗನ್ನಾಥ ರೈ ಸೇರಿದಂತೆ ಮತ್ತಿತ್ತರರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು