Sunday, January 19, 2025
ಬೆಳ್ತಂಗಡಿಸುದ್ದಿ

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಚಿಕ್ಕಮಗಳೂರು:ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮ ಬಳಿ ತಡರಾತ್ರಿ 1.30ರ ಸುಮಾರಿಗೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು. ಮತ್ತೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಮಲ್ಲೇಗೌಡ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಅತಿವೇಗದಲ್ಲಿ ಚಾಲನೆ ಮಾಡುತ್ತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ನಂತರ ಮಗುಚಿ ಬಿದ್ದಿದೆ ಎನ್ನಲಾಗಿದೆ. ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.