Sunday, January 19, 2025
ದಕ್ಷಿಣ ಕನ್ನಡಬೆಳ್ತಂಗಡಿ

Breaking News : ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ; ಪ್ರದೇಶ ಸೀಲ್ಡೌನ್ – ಜನತೆಯಲ್ಲಿ ಮನೆಮಾಡಿದೆ ಆತಂಕ – ಕಹಳೆ ನ್ಯೂಸ್

ಬೆಳ್ತಂಗಡಿ : ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ತನ್ನ ಆರ್ಭಟವನ್ನು ಹೆಚ್ಚಿಸುತ್ತಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದ್ದ ಕೊರೊನಾ ಪಾಸಿಟಿವ್ ಪ್ರಕರಣಗಳೂ ಇದೀಗ ಹಳ್ಳಿ ಹಳ್ಳಿಗಳಿಗೂ ಕಾಲಿಟ್ಟಿರೋದು ಆತಂಕಕ್ಕೆ ಕಾರಣವಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಪೆಟ್ರೋಲ್ ಪಂಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಬೆಳ್ತಂಗಡಿ ತಾಲೂಕಿನ ಜನರನ್ನು ಆತಂಕಕ್ಕೆ ತಳ್ಳಿದೆ. ಮುಂಡಾಜೆಯ ನಿವಾಸಿಯಾಗಿರುವ ಈಕೆ ಉಜಿರೆಯ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಗಂಚಲು ದ್ರವ ಪರೀಕ್ಷೆ ನಡೆಸಿದಾಗ ಕೊರೊನಾ ಇರೋದು ದೃಢಪಟ್ಟಿದೆ. ಈ ಕುರಿತು ಅಧಿಕೃತ ಘೋಷಣೆ ಆಗಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸರಕಾರದ ಆದೇಶದಂತೆ ಪೆಟ್ರೋಲ್ ಪಂಪ್, ಮೆಡಿಕಲ್ ಸ್ಟೋರ್ , ಆಸ್ಪತ್ರೆ ಸಿಬ್ಬಂದಿ ಹೀಗೆ ಒಟ್ಟು 52 ಜನರ ಗಂಟಲು ದ್ರವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು . ಅದರಲ್ಲಿ ಈಕೆಗೆ ಕೊರೊನಾ ಪಾಸಿಟಿವ್ ಬಂದಿದೆ. ಇದೀಗ ಆಕೆ ಕೆಲಸ ಮಾಡುತ್ತಿದ್ದ ಪೆಟ್ರೋಲ್ ಪಂಪ್ ನ್ನು ಸೀಲ್ ಡೌನ್ ಮಾಡುವುದಕ್ಕೆ ಸಿದ್ಧತೆ ಮಾಡಲಾಗುತ್ತಿದೆ. ಮತ್ತೊಂದು ಕಡೆ ಪ್ರತಿದಿನ ಸಾಕಷ್ಟು ಸಂಖ್ಯೆಯಲ್ಲಿ ಪೆಟ್ರೋಲ್ ಪಂಪ್ ಗೆ ಗ್ರಾಹಕರು ಬಂದಿರೋದರಿಂದ ಎಲ್ಲರಲ್ಲೂ ಇದೀಗ ಆತಂಕ ಶುರುವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು