Recent Posts

Monday, April 14, 2025
ಸುದ್ದಿ

Breaking News : ಪುತ್ತೂರಿನಲ್ಲಿ ನಾಲ್ವರಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ಸರಕಾರಿ ಆಸ್ಪತ್ರೆ ಗುತ್ತಿಗೆ ನೌಕರೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಇಬ್ಬರ ಸಹಿತ ತಾಲೂಕಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು ಆತಂಕ ಹೆಚ್ಚಿಸಿದೆ.

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿದ್ದು ಅಡುಗೆ ಕೆಲಸ ನಿರ್ವಹಿಸುತ್ತಿದ್ದ ಮಹಿಳೆ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದ ಬಜತ್ತೂರಿನ 80ರ ವೃದ್ಧೆ, ಬಪ್ಪಳಿಗೆಯ 20 ವರ್ಷದ ಯುವಕ ಮತ್ತು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 10 ದಿನಗಳ ಹಿಂದೆಯಷ್ಟೆ ಹೆರಿಗೆಯಾಗಿದ್ದ 32 ವರ್ಷ ಪ್ರಾಯದ ಕೂರ್ನಡ್ಕದ ಮಹಿಳೆಯೊಬ್ಬರಲ್ಲಿ ಕೊರೋನಾ ಸೋಂಕು ಇರುವುದು ಜೂ.27ರಂದು ದೃಢಪಟ್ಟಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರಲ್ಲಿ ಸೋಂಕು ಪತ್ತೆಯಾಗಿರುವ ಮೂವರನ್ನೂ ಮಂಗಳೂರು ವೆನ್‌ಲಾಕ್ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಆರೋಗ್ಯ, ಕಂದಾಯ, ಪೊಲೀಸ್ ಅಧಿಕಾರಿಗಳ ತಂಡ ಆಸ್ಪತ್ರೆಗಳಿಗೆ ಭೇಟಿಯಾಗಿ ಮಾಹಿತಿ ಸಂಗ್ರಹಿಸಿದ್ದು ಜಿಲ್ಲಾಧಿಕಾರಿಗಳ ಆದೇಶದ ಬಳಿಕ ಮುಂದಿನ ಪ್ರಕ್ರಿಯೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ