Recent Posts

Sunday, January 19, 2025
ಸುದ್ದಿ

ಇನ್ಮುಂದೆ ಪ್ರತಿ ಭಾನುವಾರ ಲಾಕ್‍ಡೌನ್ – ಏನಿರುತ್ತೆ? ಏನಿರಲ್ಲ? ; ನೈಟ್ ಕರ್ಫ್ಯೂ ಅವಧಿ ವಿಸ್ತರಣೆ – ರಾತ್ರಿ ಹೊರ ಬಂದ್ರೆ ಬೀಳುತ್ತೆ ಕೇಸ್..! – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ತಡೆಗಾಗಿ ಸರ್ಕಾರ ಪ್ರತಿ ಭಾನುವಾರ ಲಾಕ್‍ಡೌನ್ ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗೆಯೇ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತಿದೆ. ರಾತ್ರಿ 8 ಗಂಟೆಯಿಂದಲೇ ಕರ್ಫ್ಯೂ ಜಾರಿಯಾಗಲಿದ್ದು, ಅನಾವಶ್ಯಕವಾಗಿ ಹೊರ ಬರೋರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಕೆಲಸ ಮಾಡುವಂತೆ ನಿರ್ದೇಶನ ಸಹ ನೀಡಲಾಗಿದೆ. ಮುಂದಿನ ಭಾನುವಾರದಿಂದ ಲಾಕ್‍ಡೌನ್ ಜಾರಿಯಾಗಲಿದ್ದು, ಹಂತ ಹಂತವಾಗಿ ಟಫ್ ರೂಲ್ಸ್ ಗಳನ್ನು ಜಾರಿಗೆ ತರಲಾಗುವುದು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದಾಗಿದೆ. ಪರೀಕ್ಷೆ ಮುಗಿದ ಬಳಿಕ ಸರ್ಕಾರ ತನ್ನ ಕಠಿಣ ನಿರ್ಧಾರಗಳನ್ನು ಪ್ರಕಟಿಸಲಿದೆ. ಮುಖ್ಯಮಂತ್ರಿಗಳು ತಜ್ಞರ ಜೊತೆ ಸಭೆ ನಡೆಸುತ್ತಿದ್ದು, ಸೋಮವಾರ ಅವರೇ ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಪಬ್ಲಿಕ್ ಟಿವಿಗೆ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾನುವಾರದ ಲಾಕ್‍ಡೌನ್ ದಿನ ಏನಿರುತ್ತೆ?

ಜಾಹೀರಾತು
ಜಾಹೀರಾತು
ಜಾಹೀರಾತು

* ಅಗತ್ಯ ಸೇವೆಗಳಾದ ಆಸ್ಪತ್ರೆ, ತರಕಾರಿ
* ಅಗತ್ಯ ವಸ್ತುಗಳು ಸಾಗಾಟ (ಹಾಲು, ತರಕಾರಿ)
* ಕೆಎಸ್‍ಆರ್ ಟಿಸಿ ಬಸ್

ಏನಿರಲ್ಲ?
* ಬಸ್, ಆಟೋ, ಟ್ಯಾಕ್ಸಿ ಇರಲ್ಲ
* ಹೇರ್ ಕಟ್ಟಿಂಗ್ ಸಲೂನ್
* ಅಂಗಡಿ ಮುಗ್ಗಟ್ಟುಗಳು
* ಇನ್ನಿತರ ಸೇವೆಗಳು

ಇಂದಿನ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು : 
1. ಜುಲೈ 5ನೇ ತಾರೀಖಿನಿಂದ ಮುಂದಿನ ಆದೇಶದವರೆಗೆ ಪ್ರತಿ ಭಾನುವಾರ ರಾಜ್ಯಾದ್ಯಂತ ಲಾಕ್‍ಡೌನ್. (ವಸ್ತುಗಳ ಸಾಗಾಣಿಕೆಗೆ ನಿರ್ಬಂದವಿಲ್ಲ).
2. ಜುಲೈ 10ನೇ ತಾರಿಖಿನಿಂದ ಒಂದು ತಿಂಗಳ ಕಾಲ ಈಗಾಗಲೇ ರಜೆಯಿರುವ 2ನೇ ಹಾಗೂ 4ನೇ ಶನಿವಾರದ ಜೊತೆಗೆ ಉಳಿದ ಶನಿವಾರದಂದು ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯಕ್ಕೊಳಪಡುವ ಎಲ್ಲಾ ಕಚೇರಿಗಳಿಗೆ ರಜೆ.
3. ಪ್ರತಿ ದಿನ ರಾತ್ರಿ 9.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಈಗಾಗಲೇ ಇರುವ ಕರ್ಫ್ಯೂ ಅವಧಿಯ ಬದಲಾಗಿ ರಾತ್ರಿ 8.00 ಗಂಟೆಯಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಕರ್ಫ್ಯೂ ಅವಧಿಯಲ್ಲಿ ಬದಲಾವಣೆ
4. ಬೆಂಗಳೂರಿನಲ್ಲಿರುವ ಬೃಹತ್ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳಲ್ಲಿ ಆಗುವ ಜನದಟ್ಟಣೆಯನ್ನು ತಪ್ಪಿಸುವ ಉದ್ದೇಶದಿಂದ ಹೆಚ್ಚಿನ ಹೋಲ್‍ಸೇಲ್ ತರಕಾರಿ ಮಾರುಕಟ್ಟೆಗಳನ್ನು ತೆರೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ಸೂಚನೆ.
5. ಕೋವಿಡ್-19 ಸೋಂಕಿತ ರೋಗಿಗಳನ್ನು ಶೀಘ್ರವಾಗಿ ಕೋವಿಡ್ ಆಸ್ಪತ್ರೆಗಳಿಗೆ ಸೇರಿಸಲು (ಸೆಂಟ್ರಲೈಜ್ ಬೆಡ್ ಅಲೋಕೇಷನ್ ಸಿಸ್ಟಮ್) ತಂತ್ರಾಂಶದ ಮೂಲಕ ಜಾರಿ.

6. ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಗಳನ್ನು ಆಸ್ಪತ್ರೆಗೆ ಸಾಗಿಸಲು ಅಂಬ್ಯುಲೆನ್ಸ್ ಸಂಖ್ಯೆಗಳನ್ನು 250ಕ್ಕೆ ಹೆಚ್ಚಿಸಲು ಮತ್ತು ಕೋವಿಡ್‍ನಿಂದ ಮೃತರಾದ ದೇಹಗಳನ್ನು ಸಾಗಿಸಲು ಪ್ರತ್ಯೇಕ ಅಂಬ್ಯುಲೆನ್ಸ್ ವ್ಯವಸ್ಥೆ. ಅಂಬ್ಯುಲೆನ್ಸ್ ಇರುವ ಸ್ಥಳವನ್ನು ಗುರುತಿಸಲು ಮತ್ತು ಅವುಗಳ ಸರಳ ಚಲನವಲನಗಳ ಸಲುವಾಗಿ ಪೊಲೀಸ್ ಕಂಟ್ರೋಲ್ ರೂಂ ವೈರ್ಲೆಸ್ ಸೇವೆಯನ್ನು ಬಳಸಿಕೊಳ್ಳಲು ಸೂಚನೆ.
7. ಕೋವಿಡ್-19 ರ ನಿಯಂತ್ರಣದಲ್ಲಿ ಕೆಲಸ ಮಾಡುವ ಎಲ್ಲಾ ನೋಡಲ್ ಅಧಿಕಾರಿಗಳ ವಿವರಗಳನ್ನು ಪತ್ರಿಕೆಗಳ ಜಾಹಿರಾತು ಮುಖಾಂತರ ಸಾರ್ವಜನಿಕರಿಗೆ ಪ್ರಚುರಪಡಿಸಲು ಕ್ರಮ.
8. ಬಿ.ಬಿ.ಎಂ.ಪಿ ಕೇಂದ್ರ ಕಚೇರಿ ಹಾಗೂ ಆಯುಕ್ತರ ಮೇಲೆ ಇರುವ ಕೆಲಸದ ಹೊರೆಯನ್ನು ಕಡಿಮೆಗೊಳಿಸಲು ಬಿ.ಬಿ.ಎಂ.ಪಿ ಯಲ್ಲಿನ 08 ವಲಯಗಳ ಜಂಟಿ ಆಯುಕ್ತರಿಗೆ ಹೆಚ್ಚಿನ ಜವಾಬ್ದಾರಿ ಹಾಗೂ ಕೆಲಸಗಳನ್ನು ನೀಡಲು ಮತ್ತು ಅವರ ಜೊತೆಗೆ ಕೆಲಸ ಮಾಡಲು ಕೆ.ಎ.ಎಸ್ ಅಧಿಕಾರಿಗಳನ್ನು ನಿಯೋಜಿಸಲು ಸರ್ಕಾರ ತೀರ್ಮಾನಿಸಿದೆ.
9. ವೈದ್ಯರ ಕೊರತೆಯನ್ನು ನೀಗಿಸಲು ಕಾರ್ಮಿಕ ಇಲಾಖೆಯಿಂದ ನೇಮಕವಾಗಿರುವ 180 ಎ.ಎಸ್.ಐ ಡಾಕ್ಟರ್ಗಳನ್ನು ಕೋವಿಡ್ ಕರ್ತವ್ಯಕ್ಕೆ ಬಳಸಿಕೊಳ್ಳಲು ಮತ್ತು ಪರೀಕ್ಷಾರ್ತಿ ತಹಶೀಲ್ದಾರ್ ಗಳನ್ನು ಕೋವಿಡ್ ಆಸ್ಪತ್ರೆಗಳು/ಕೇರ್ ಸೆಂಟರ್ ಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ಹಾಕಲು ಸೂಚಿಸಲಾಗಿದೆ.
10. ಬೆಂಗಳೂರಿನಲ್ಲಿ ಲಭ್ಯವಿರುವ ಕಲ್ಯಾಣ ಮಂಟಪಗಳು, ಹಾಸ್ಟೆಲ್‍ಗಳು ಹಾಗೂ ಇನ್ನಿತರೆ ಸಂಸ್ಥೆಗಳನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ಮೀಸಲಿಡಲು ಹಾಗೂ ರೈಲ್ವೆ ಇಲಾಖೆಯಿಂದ ಬೆಡ್‍ಗಳ ಕೋಚ್‍ನ್ನು ಪಡೆಯಲು ಅವಶ್ಯ ಕ್ರಮ ಜರುಗಿಸಲು ಸೂಚನೆ ನೀಡಿದೆ.

11. ಕೋವಿಡ್‍ನಿಂದ ಮೃತರಾದ ದೇಹಗಳ ಅಂತ್ಯಕ್ರಿಯೆಯನ್ನು ಜರುಗಿಸಲು ಪ್ರತ್ಯೇಕ ತಂಡಗಳನ್ನು ರಚಿಸುವುದು ಹಾಗೂ ದೇಹಗಳ ಅಂತ್ಯಕ್ರಿಯೆಯ ಸಲುವಾಗಿ ಇನ್ನೂ ಹೆಚ್ಚಿನ ಜಾಗಗಳನ್ನು ಗುರುತಿಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಸೂಚಿಸಲು ತೀರ್ಮಾನಿಸಿದೆ.
11. ಮೆಡಿಕಲ್ ಕಾಲೇಜ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಪೈಕಿ ಶೇ.50 ರಷ್ಟನ್ನು ಕೋವಿಡ್ ರೋಗಿಗಳ ಸಲುವಾಗಿ ಮೀಸಲಿಡಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚನೆ ನೀಡಿದೆ.
12.ಆಸ್ಪತ್ರೆಗಳಲ್ಲಿ ಬೆಡ್‍ಗಳು ಪೂರ್ತಿಯಾದ ನಂತರ ರೋಗಿಗಳನ್ನು ಹೋಟೆಲ್‍ಗಳ ಕೊಠಡಿಗಳನ್ನು ಚಿಕಿತ್ಸೆಗಾಗಿ ಬಳಸಿಕೊಳ್ಳುವ ಉದ್ದೇಶದಿಂದ ಹೋಟೆಲ್‍ಗಳನ್ನು ಆಸ್ಪತ್ರೆಗಳಿಗೆ ಟೈಯಪ್ ಮಾಡಲು ಸೂಕ್ತ ಕ್ರಮ ಕೈಗೊಳ್ಳಲು ಬಿ.ಬಿ.ಎಂ.ಪಿ ಆಯುಕ್ತರಿಗೆ ಸೂಚಿಸಲಾಗಿದೆ.