ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೆ ಇಬ್ಬರು ಬಲಿ : ಸುರತ್ಕಲ್ ನ 31 ವರ್ಷದ ಯುವಕ, ಬಂಟ್ವಾಳದ 57 ವರ್ಷದ ವೃದ್ದೆ ಸಾವು – ಕಹಳೆ ನ್ಯೂಸ್
ಮಂಗಳೂರು : ಕರಾವಳಿಯಲ್ಲಿ ಡೆಡ್ಲಿ ಮಹಾಮಾರಿಯ ಅಬ್ಬರ ಜೋರಾಗುತ್ತಿದ್ದು, ಕೊರೊನಾ ಸೋಂಕು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಬಲಿ ಪಡೆದಿದೆ. ಈ ಮೂಲಕ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯ 12ಕ್ಕೆ ಏರಿಕೆಯಾಗಿದೆ.
ಬಂಟ್ವಾಳದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಿಸುತ್ತಿದೆ. ಜಿಲ್ಲೆಯಲ್ಲಿ ಅತೀ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಬಂಟ್ವಾಳದಲ್ಲಿ ಇದೀಗ ಮತ್ತೊಂದು ಬಲಿಯಾಗಿದೆ. 57 ವರ್ಷದ ಬಂಟ್ವಾಳದ ವೃದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಲಿವರ್ ಹಾಗೂ ಹೃದಯ ರೋಗದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರದ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಸಾವನ್ನಪ್ಪಿದ್ದಾರೆ.
ಇನ್ನು ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಸುರತ್ಕಲ್ ಇಡ್ಯಾದ ನಿವಾಸಿಯಾಗಿರುವ 31 ವರ್ಷದ ಯುವಕ ಕೂಡ ಬಲಿಯಾಗಿದ್ದಾನೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. 31 ವರ್ಷದ ಯುವಕ ಕೊರೊನಾ ಸೋಂಕಿಗೆ ಬಲಿಯಾಗಿರುವುದು ಆತಂಕವನ್ನು ಮೂಡಿಸಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ194ಕ್ಕೆ ಏರಿಕೆಯಾಗಿದೆ.