Sunday, January 19, 2025
ಸುದ್ದಿ

Breaking News : ರಾಜ್ಯದಲ್ಲಿ ಇಂದು ಕೊರೊನಾ ಮಾಹಾ ಸ್ಫೋಟ : ಬೆಂಗಳೂರಿನಲ್ಲಿ 783, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಮಂದಿಗೆ ಕೊರೊನಾ ಪಾಸಿಟಿವ್ ; ರಾಜ್ಯದಲ್ಲಿಂದು ಒಟ್ಟು 1267 ಮಂದಿಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಮಹಾಸ್ಪೋಟ ಸಂಭವಿಸಿದೆ. ಬೆಂಗಳೂರಲ್ಲಿ ಒಂದೇ ದಿನ ಬರೋಬ್ಬರಿ 783 ಮಂದಿಗೆ ಸೋಂಕು ಕಾಣಿಸಿಕೊಂಡಿದ್ರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 97 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿಂದು ಒಂದೇ ದಿನ ಬರೋಬ್ಬರಿ 1267 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 13,190ಕ್ಕೆ ಏರಿಕೆಯನ್ನು ಕಂಡಿದೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ಕೊರೊನಾ ವೈರಸ್ ಸೋಂಕು ಬಿಗ್ ಶಾಕ್ ಕೊಟ್ಟಿದೆ. ಇಂದು ಒಂದೇ ದಿನ ದಾಖಲೆಯ ಪ್ರಮಾಣದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಬೆಂಗಳೂರಲ್ಲಿಂದು ಬರೊಬ್ಬರಿ 783 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 3314ಕ್ಕೆ ಏರಿಕೆಯನ್ನು ಕಂಡಿದೆ. ಮಾತ್ರವಲ್ಲ ಕೊರೊನಾ ಮಹಾಮಾರಿಗೆ ಬಲಿಯಾಗುವವರ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಇದುವರೆಗೆ 88 ಮಂದಿ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಇಂದು ಆರ್ಭಟಿಸಿದೆ. ಜಿಲ್ಲೆಯಲ್ಲಿಂದು ಬರೋಬ್ಬರಿ 97 ಮಂದಿಗೆ ಸೋಂಕು ಕಾಣಿಸಿಕೊಳ್ಳುವ ಮೂಲಕ ಹೊಸ ದಾಖಲೆಯನ್ನು ಬರೆದಿದೆ. ಜಿಲ್ಲೆಯಲ್ಲಿ ಕಳೆದೊಂದು ಹತ್ತು ದಿನಗಳಿಂದಲೂ ಸೋಂಕಿತ ಸಂಖ್ಯೆಯಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯನ್ನು ಕಾಣುತ್ತಿದ್ದು, ಇದೀಗ ಕೊರೊನಾ ಪೀಡಿತರ ಸಂಖ್ಯೆ 697ಕ್ಕೆ ಏರಿಕೆಯಾಗಿದೆ. ಅಲ್ಲದೇ ಇಂದು ಒಂದೇ ದಿನ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ ಮೂವರು ಸಾವನ್ನಪ್ಪಿದ್ದು ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯನ್ನು ಕಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು