ಉಡುಪಿ: ವಿಶೇಷ ನ್ಯಾಯಾಲಯದಿಂದ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ.
ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಕೋರ್ಟ್ ಸೂಚಿಸಿತ್ತು. ಆದರೆ ಡಿಸಿ ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿ ಮಾಹಿತಿ ನೀಡಿರಲಿಲ್ಲ. ಕೆರೆ, ಸರಕಾರಿ ಭೂಮಿ, ರಸ್ತೆಯ ಇಕ್ಕೆಲ ಒತ್ತುವರಿ ಬಗ್ಗೆ ವಿಶೇಷ ಭೂ ನ್ಯಾಯಾಲಯದಲ್ಲಿ ಪ್ರಕರಗಳು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೈಗೊಂಡ ಕ್ರಮದ ಬಗ್ಗೆ ಮಾಹಿತಿ ಕೇಳಿತ್ತು.
ಜಿಲ್ಲಾಧಿಕಾರಿ ನ್ಯಾಯಾಲಯಕ್ಕೆ ಉತ್ತರ ನೀಡದ ಹಿನ್ನೆಲೆ ಬಂಧನ ವಾರೆಂಟ್ ಹೊರಡಿಸಿದೆ. ಆದ್ದರಿಂದ ಜಿಲ್ಲಾ ಎಸ್‍ಪಿ ಕಚೇರಿಗೆ ವಾರೆಂಟ್ ತಲುಪಿದೆ. ಇತ್ತ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಜಾಮೀನಿಗೆ ಪ್ರಯತ್ನಿಸಿದ್ದು, ಮಾರ್ಚ್ 13ರಂದು ಖುದ್ದು ನ್ಯಾಯಾಲಯದಲ್ಲಿ ಹಾಜರಾಗಲು ಡಿಸಿ ನಿರ್ಧರಿಸಿದ್ದಾರೆ.
ವರದಿ : ಕಹಳೆ ನ್ಯೂಸ್