Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 10 ಮಂದಿ ವೈದ್ಯರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಇಡೀ ಜಿಲ್ಲೆಯ ಜನತೆಯ ಆತಂಕ್ಕೆ ಕಾರಣವಾಗಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯ ಮುಖ್ಯ ವೈದ್ಯರೊರೊಬ್ಬರು ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರೊಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದಾಗಿ ಮೂಲಗಳು ತಿಳಿಸಿವೆ.
ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ. ಆಸ್ಪತ್ರೆ ಸಿಬ್ಬಂದಿಯ ಗಂಟಲು ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಇದರ ವರದಿ ಇನ್ನಷ್ಟೇ ಕೈ ಸೇರಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್‍ಗೆ ಸುಶ್ರೂಷೆ ನೀಡುವ ವೈದ್ಯರಿಗೇ ಕೊರೊನಾ ಪಾಸಿಟಿವ್ ಆಗಿರುವುದು ಜಿಲ್ಲೆಯ ಮಟ್ಟಿಗೆ ಕಹಿ ಘಟನೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು