Sunday, January 19, 2025
ಸುದ್ದಿ

ರಾಜ್ಯ ಕರಾವಳಿಯಲ್ಲಿ ಇನ್ನು 3 ದಿನ ಮಳೆ : ಹವಾಮಾನ ಇಲಾಖೆಯಿಂದ ‘ಯೆಲ್ಲೋ ಅಲರ್ಟ್’ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಇನ್ನು 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ತುಮಕೂರು, ಧಾರವಾಡ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳಲ್ಲಿ ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಕುರಿತಂತೆಭಾರತೀಯ ಹವಾಮಾನ ಇಲಾಖೆ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ. ಎಸ್ ಪಾಟೀಲ್ ಸ್ಪಷ್ಟಪಡಿಸಿದ್ದು, ನಾಳೆ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ, ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಸಾಧಾರಾಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಅವರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು