Sunday, January 19, 2025
ಜಿಲ್ಲೆದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ತಾಂಡವ ; ಜಿಲ್ಲಾಡಳಿತ ಢವ ಢವ..! ಮಂಗಳೂರಲ್ಲಿ ಆರೋಗ್ಯಾಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ; DHO, THO ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡದ ಜಿಲ್ಲಾಡಳಿತ ಬೆಚ್ಚಿಬಿದ್ದಿದೆ. ಕರಾವಳಿಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳವಾಗುತ್ತಿದೆ. ಇಷ್ಟು ದಿನ ಜನಸಾಮಾನ್ಯರನ್ನು ಕಾಡುತ್ತಿದ್ದ ಮಹಾಮಾರಿ ಇದೀಗ ಆರೋಗ್ಯಾಧಿಕಾರಿಗಳಿಗೆ ಒಕ್ಕರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಮಂಗಳೂರಲ್ಲಿ ಶಾಸಕರಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಇದೀಗ ಆರೋಗ್ಯಾಧಿಕಾರಿಗಳಿಗೆ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯಾಗಿದ್ರೆ, ಇನ್ನೊಬ್ಬರು ತಾಲೂಕು ಮಟ್ಟದ ಅಧಿಕಾರಿ. ಇಬ್ಬರೂ ಕೂಡ ಮಂಗಳೂರಲ್ಲಿ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಹೀಗಾಗಿ ಸೋಂಕು ಹರಡುವ ಆತಂಕ ಶುರುವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಆರೋಗ್ಯಾಧಿಕಾರಿಗಳ ಜೊತೆಗೆ ಪ್ರಾಥಮಿಕ ಸಂರ್ಪಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯವನ್ನು ನಡೆಸಲಾಗುತ್ತಿದೆ. ಇದೀಗ ಆರೋಗ್ಯ ಇಲಾಖೆಗೆ ಕೊರೊನಾ ಸೋಂಕು ಒಕ್ಕರಿಸಿರುವುದು ಜಿಲ್ಲಾಡಳಿತಕ್ಕೆ ತಲೆನೋವು ತರಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು