Recent Posts

Sunday, January 19, 2025
ಸುದ್ದಿ

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು-ಕಹಳೆ ನ್ಯೂಸ್

ಕಡಬ : ಕಡಬ ತಾಲೂಕಿನ ಎಡಮಂಗಲದ ದೊಳ್ತಿಲ ಎಂಬಲ್ಲಿ ಕುಮಾರಧಾರ ನದಿಗೆ ಮೀನು ಹಿಡಿಯಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ತಡರಾತ್ರಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಾಪತ್ತೆಯಾದ ಯುವಕನನ್ನು ದೊಳ್ತಿಲ ರಾಮಣ್ಣ ನಾಯ್ಕ್ ಅವರ ಪುತ್ರ ಪ್ರಕಾಶ್ ಎಂದು ಗುರುತಿಸಲಾಗಿದ್ದು, ಪ್ರಕಾಶ್ ಹಾಗೂ ತನ್ನ ಸ್ನೇಹಿತರಿಬ್ಬರ ಜೊತೆ ಮೀನು ಹಿಡಿಯಲು ಬಿಟ್ಟಿದ್ದ ಬಲೆಯನ್ನು ಈಜಿ ತರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಭೇಟಿ ನೀಡಿದ್ದು ಶೋಧ ಕಾರ್ಯ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು