Sunday, January 19, 2025
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಜು. 04 : ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಲ್ಲೇ ಇದ್ದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಿಗೂ ಕೊರೊನಾ ಸೋಂಕು ಪಾಸಿಟಿವ್‌ ಆಗಿದೆ. ಈ ಬಗ್ಗೆ ಅವರೇ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

”ಕೋವಿಡ್ -19 ಪರೀಕ್ಷೆಯಲ್ಲಿ ನನಗೆ ಪಾಸಿಟಿವ್‌ ವರದಿ ಬಂದಿದೆ. ನಿಮ್ಮೆಲ್ಲರಾ ಆಶೀರ್ವಾದದೊಂದಿಗೆ ನಾನು ಗುಣಮುಖನಾಗುತ್ತಿದ್ದೇನೆ ಹಾಗೂ ಆಸ್ಪತ್ರೆಯಲ್ಲಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದೇನೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಹೊರ ಹೋಗುವಾಗ ಮಾಸ್ಕ್‌ ಧರಿಸಿ ಹಾಗೂ ಸುರಕ್ಷಿತವಾಗಿರಿ ಎಂಬುದು ನನ್ನ ಮನವಿ. ದಯವಿಟ್ಟು ಎಲ್ಲರೂ ನಿಮ್ಮನ್ನು ಹಾಗೂ ನಿಮ್ಮವರನ್ನು ನೋಡಿಕೊಳ್ಳಿ” ಎಂದು ಸಾಮಾಜಿಕ ಜಾಲತಾಣದಲ್ಲಿ ಅವರು ಮನವಿ ಮಾಡಿದ್ದಾರೆ.

ಇತ್ತೀಚೆಗೆ ಬಿಜೆಪಿ ಶಾಸಕರೊಬ್ಬರಿಗೂ ಕೊರೊನಾ ಸೋಂಕು ಪಾಸಿಟಿವ್‌ ಆಗಿದ್ದು ಅವರು ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು.