Sunday, January 19, 2025
ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಗುರುಪುರ ಬಳಿ ಗುಡ್ಡ ಕುಸಿದು ಮನೆಗಳು ನೆಮಸಮ; ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು-ಕಹಳೆ ನ್ಯೂಸ್

ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತ ಮಳೆಯಾಗಿದ್ದರಿಂದ ಭಾನುವಾರ ಗುಡ್ಡ ಕುಸಿದು ಮನೆಗಳು ನೆಲಸಮಗೊಂಡಿದ್ದು, ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನ ಗುರುಪುರ ಬಳಿಯ ಬಂಗ್ಲೆಗುಡ್ಡೆಯಲ್ಲಿ ಭಾನುವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಹಲವು ಮನೆಗಳು ನೆಲಸಮಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನಾ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದು, ಜೆಸಿಬಿ ಮೂಲಕ ಅವಶೇಷಗಳಡಿ ಸಿಲುಕಿರುವ ಮಕ್ಕಳನ್ನು ರಕ್ಷಿಸುವ ಕೆಲಸ ಭರದಿಂದ ಸಾಗಿದೆ. ಮಣ್ಣಿನಡಿ 16 ವರ್ಷದ ಬಾಲಕ ಮತ್ತು ಮತ್ತೊಬ್ಬ ಬಾಲಕ ಸಿಲುಕಿದ್ದಾರೆ ಎನ್ನಲಾಗಿದೆ.