Monday, April 7, 2025
ಸುದ್ದಿ

ರಾಜ್ಯಸಭೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮಂಗಳೂರಿನ ಬಿ.ಎಂ ಫಾರೂಕ್

ಬೆಂಗಳೂರು : ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಫಿಜಾ ಡೆವಲಪರ್ಸ್ ಸಂಸ್ಥಾಪಕರಾದ ಬಿ.ಎಂ ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ.

ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಗಳೂರಿನ ನಿವಾಸಿ ಬಿ.ಎಂ ಫಾರೂಕ್ (51) ಬಿ.ಇ ಮೆಕ್ಯಾನಿಕಲ್ ವ್ಯಾಸಂಗ ಮಾಡಿದ್ದು, ರಾಜ್ಯ ಸಭೆಗೆ ನಡೆಯುವ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಚುನಾವಣಾ ಅಧಿಕಾರಿ ಆಗಿರುವ ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರಿಗೆ ಫಾರೂಕ್ ನಾಮಪತ್ರ ಸಲ್ಲಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಾರೂಕ್ ಅವರಿಗೆ ಸೋಲಾಗಿತ್ತು. ಮತ್ತೆ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ರಾಜ್ಯಸಭೆ ಚುನಾವಣಾ ಕಣಕ್ಕಿಳಿದಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ