Sunday, January 19, 2025
ಕಾಸರಗೋಡುಸುದ್ದಿ

ಮಂಗಳೂರಿನಿಂದ ಕಾಸರಗೋಡಿಗೆ ಹೊರಟವರಿಗೆ ತಡೆ: ತಲಪಾಡಿ ಚೆಕ್‌ಪೋಸ್ಟ್ ಬಳಿ ನೂರಾರು ಜನ-ಕಹಳೆ ನ್ಯೂಸ್

ಮಂಗಳೂರು: ಉದ್ಯೋಗ ನಿಮಿತ್ತ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ನಿತ್ಯವೂ ಸಂಚರಿಸುತ್ತಿದ್ದವರಿಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಕಾಸರಗೋಡು ಜಿಲ್ಲಾಡಳಿತ ಮಂಗಳವಾರ ಬೆಳಿಗ್ಗೆ ತಡೆಹಾಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉದ್ಯೋಗ, ಶಿಕ್ಷಣದ ಕಾರಣಕ್ಕೆ ನಿತ್ಯವೂ ಎರಡೂ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಉಭಯ ಜಿಲ್ಲಾಡಳಿತಗಳು ಪಾಸ್ ನೀಡಿದ್ದವು. ಆದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಕಾಸರಗೋಡು ಜಿಲ್ಲಾಡಳಿತ ಮಂಗಳವಾರದಿಂದ ಪ್ರಯಾಣ ನಿರ್ಬಂಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ತಿಂಗಳಲ್ಲಿ ಒಮ್ಮೆ ಮಾತ್ರ ಒಂದು ಕಡೆಗೆ ಪ್ರಯಾಣಿಸಬೇಕು ಮತ್ತು ಕನಿಷ್ಠ 28 ದಿನಗಳ ಕಾಲ ಅಲ್ಲಿಯೇ ಇರಬೇಕು ಎಂಬ ಷರತ್ತನ್ನು ಕಾಸರಗೋಡು ಜಿಲ್ಲಾಡಳಿತ ವಿಧಿಸಿದೆ.‌ ಈ ಹಿಂದೆ ನೀಡಿದ್ದ ಪಾಸ್ ಹಿಡಿದು ಮಂಗಳವಾರ ಬೆಳಿಗ್ಗೆ ತಲಪಾಡಿ ಚೆಕ್ ಬಳಿ ಬಂದ ನೂರಕ್ಕೂ ಹೆಚ್ಚು ಮಂದಿಯನ್ನು ಕಾಸರಗೋಡು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಪೊಲೀಸರು ಮತ್ತು ಜನರ ನಡುವೆ ವಾಗ್ವಾದ ನಡೆಯುತ್ತಿದೆ.

 

ಸ್ಥಳದಲ್ಲಿ ಬಿಗು ವಾತಾವರಣ ನಿರ್ಮಾಣ ಆಗಿದೆ. ಹೆಚ್ಚುವರಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.

 

ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಮುಖಂಡ ವಕೀಲ ನವೀನ್ ರಾಜ್ , ಭಾರತೀಯ ರೈಲ್ವೇ ಮಜ್ದೂರ್ ಸಂಘ ಡಿವಿಸನಲ್‌ ಅಧ್ಯಕ್ಷ ತುಳಸೀದಾಸ್, ಮಂಜೇಶ್ವರ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಅವಿನಾಶ್, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಆದರ್ಶ್ ಬಿ.ಎಂ ಇದ್ದಾರೆ.

ತಲಪಾಡೆ ಚೆಕ್‌ಪೋಸ್ಟ್‌ ಬಳಿ ಮಂಗಳೂರಿನಿಂದ ಬರುತ್ತಿರುವವರನ್ನು ಪೊಲೀಸರು ತಡೆಯುತ್ತಿದ್ದಾರೆ.