Monday, March 31, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಜು 7ರಿಂದ 11ರವರೆಗೆ ಭಾರಿ ಮಳೆ ಸಾಧ್ಯತೆ ; ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು, ಜು 07 : ಜು 7ರಿಂದ 11ರವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌‌ ಘೋಷಿಸಲಾಗಿದೆ ಎಂಬುದಾಗಿ ಹವಾಮಾನ ಇಲಾಖೆ ಹೇಳಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆ ಕರಾವಳಿಯ ಕಡೆಗೆ ಆಗ್ನೇಯ ಅರಬ್ಬಿ ಸಮುದ್ರದಿಂದ ಗಂಟೆಗೆ ಸುಮಾರು 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ನಿಟ್ಟಿನಲ್ಲಿ ಮೀನುಗಾರರು ಸಮುದ್ರಕ್ಕಿಳಿಯಬಾರದು ಎಂದು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಜು 10ರಿಂದ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣವು ಅಧಿಕವಾಗಲಿದ್ದು, ಮುಂದಿನ 48 ಗಂಟೆಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಬಹುದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಳ್ತಂಗಡಿ, ಪುತ್ತೂರು, ಸುಳ್ಯ, ಕಾರ್ಕಳ, ಬೆಳಗಾವಿ, ಮಡಿಕೇರಿ 2, ಭಾಗಮಂಡಲ 6, ಸುಬ್ರಹ್ಮಣ್ಯ, ಸಿದ್ದಾಪುರ, ಕದ್ರಾ, ಸಾಗರ, ಶೃಂಗೇರಿ, ಸಕಲೇಶಪುರ 4, ಧರ್ಮಸ್ಥಳ, ಉಪ್ಪಿನಂಗಡಿ, ಅಂಕೋಲಾ, ಹೊಸನಗರ, ಮೂಡಿಗೆರೆ, ಕೊಪ್ಪ 3, ಮೂಡುಬಿದ್ರೆ, ಕುಂದಾಪುರ, ಕಾರವಾರ, ಭಟ್ಕಳ, ಗೋಕರ್ಣ, ಬೇಲೂರು, ಎಚ್.ಡಿ.ಕೋಟೆ, ಶ್ರೀರಂಗಪಟ್ಟಣ 1, ಕೊಟ್ಟಿಗೆಹಾರ 8, ಸುಬ್ರಹ್ಮಣ್ಯ, ಸಿದ್ದಾಪುರ, ಕದ್ರಾ, ಸಾಗರ, ಶೃಂಗೇರಿ, ಸಕಲೇಶಪುರ 4, ಕಳಸ 5 ಹಾಗೂ ಕೊಲ್ಲೂರಿನಲ್ಲಿ ಸೋಮವಾರ 10 ಸೆ.ಮೀ ಗರಿಷ್ಠ ಮಳೆಯಾಗಿದೆ ಎಂದು ತಿಳಿಸಿದೆ.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ