Saturday, November 23, 2024
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಯಾವುದೇ ಲಾಕ್ ಡೌನ್ ಇಲ್ಲ, ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ – ಕಹಳೆ‌ ನ್ಯೂಸ್

ಮಂಗಳೂರು, ಜು 07 : ದಕ್ಷಿಣ ಕನ್ನಡದಲ್ಲಿ ಮತ್ತೆ ಮಧ್ಯಾಹ್ನದ ಬಳಿಕ ಲಾಕ್‌ಡೌನ್ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಾದ ವಾಟ್ಸಪ್ ಫೇಸ್ ಬುಕ್ ಗಳಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸಾಮಾಜಿಕ ಜಾಲತಾಣದಲ್ಲಿ ಜುಲೈ 6ರ ಸೋಮವಾರ ಬೆಳಗ್ಗಿನಿಂದ ಇಂತಹ ಸಂದೇಶವೊಂದು ಹರಿದಾಡುತ್ತಿದೆ. ಇದರಿಂದಾಗಿ ಜಿಲ್ಲೆಯ ಜನತೆ ಗೊಂದಲಕ್ಕಿಡಾಗಿದ್ದರು. ಕಚೇರಿಗಳು, ಮಾಧ್ಯಮಗಳನ್ನು ಸಂಪರ್ಕಿಸಿ ವಿಚಾರದ ಬಗ್ಗೆ ಮಾಹಿತಿ ಪಡೆಯುತ್ತಿದ್ದರು. ಈ ವಿಚಾರ ಜಿಲ್ಲಾಧಿಕಾರಿಗಳಿಗೂ ಮುಟ್ಟಿದ್ದು, ಇದೀಗ ಜಿಲ್ಲಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ದ.ಕ. ಜಿಲ್ಲೆಯಲ್ಲಿ ನಿತ್ಯ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಅಲ್ಲದೆ, ರವಿವಾರ ಇಡೀ ದಿನ ಲಾಕ್‌ಡೌನ್ ಜಾರಿಯಲ್ಲಿದೆ. ಉಳಿದ ಸಮಯದಲ್ಲಿ ಎಂದಿನಂತೆ ಲಾಕ್‌ಡೌನ್ ಸಡಿಲಿಕೆ ಇರಲಿದೆ. ಸದ್ಯ ಲಾಕ್‌ಡೌನ್‌ನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.